ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರೇಕ್ಷಕರನ್ನು ಸೆಳೆದ ‘ಬ್ಲಿಂಕ್’ ಸಿನಿಮಾ: ಶೋಗಳ ಸಂಖ್ಯೆ ಹೆಚ್ಚಳ

‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿವೆ. ಕೆಲ ಯುವಕರ ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಯಶಸ್ವಿಯಾಗಿರುವುದು ಭರವಸೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ ಬಿಡುಗಡೆ ಆದಾಗ ಕೆಲವೇ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದ ಸಿನಿಮಾ, ಕಂಟೆಂಟ್​ನಿಂದ ಪ್ರೇಕ್ಷಕರನ್ನು ಸೆಳೆದು ಇದೀಗ ಶೋಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ.
11:09 AM Mar 24, 2024 IST | Chaitra Kulal

‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿವೆ. ಕೆಲ ಯುವಕರ ತಂಡಗಳು ಪ್ರೇಕ್ಷಕರನ್ನು ಸೆಳೆಯಲು ಯಶಸ್ವಿಯಾಗಿರುವುದು ಭರವಸೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ ಬಿಡುಗಡೆ ಆದಾಗ ಕೆಲವೇ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದ ಸಿನಿಮಾ, ಕಂಟೆಂಟ್​ನಿಂದ ಪ್ರೇಕ್ಷಕರನ್ನು ಸೆಳೆದು ಇದೀಗ ಶೋಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ.

Advertisement

ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ‘ಬ್ಲಿಂಕ್’ ಸಿನಿಮಾಗೆ ಪ್ರಾರಂಭದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿರಲಿಲ್ಲ. ಆರಂಭದ ದಿನಗಳಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು, ಸಿನಿಮಾದ ಬಗ್ಗೆ ಮಾತನಾಡಿ ಆದ ಮೌತ್ ಪಬ್ಲಿಸಿಟಿಯಿಂದ ‘ಬ್ಲಿಂಕ್’ ಶೋಗಳು ಏರಿಕೆಯಾಗುತ್ತಾ ಹೋಯಿತು. ಕನ್ನಡ ಸಿನಿಮಾಗಳಿಗೆ ಶೋ ಸಿಗುತ್ತಿಲ್ಲ ಎಂಬ ಮಾತಿನ ನಡುವೆ 8 ಶೋಗಳಿಂದ 82 ಶೋ ಬ್ಲಿಂಕ್ ಪಾಲಾಗಿದೆ ಎಂಬುದು ಚಿತ್ರತಂಡದ ಹೆಮ್ಮೆ. ‘ಬ್ಲಿಂಕ್’ ಸಿನಿಮಾಕ್ಕೆ ಚಿತ್ರರಂಗದ ಕೆಲವು ಪ್ರಮುಖ ನಟ, ನಟಿಯರು ಸಹ ಬೆಂಬಲ ವ್ಯಕ್ತಪಡಿಸಿದರು. ಸಿನಿಮಾಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆ, ಸಿನಿಮಾದ ಬಗ್ಗೆ ಕೇಳಿ ಬಂದ ಉತ್ತಮ ವಿಮರ್ಶೆಗಳನ್ನು ಗಮನಿಸಿ ಸ್ವತಃ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಬ್ಲಿಂಕ್’ ಸಿನಿಮಾ ನೋಡುವ ಇಂಗಿತ ವ್ಯಕ್ತಪಡಿಸಿದ್ದರು.

ಇನ್ನುಳಿದಂತೆ ಸಿಂಪಲ್ ಸುನಿ, ನವೀನ್ ಶಂಕರ್, ರುಕ್ಮಿಣಿ ವಸಂತ್ ಹಾಗೂ ನಟಿ ಬೃಂದಾ ಆಚಾರ್ ಸೇರಿದಂತೆ ಹಲವಾರು ಕನ್ನಡ ತಾರೆಯರು ‘ಬ್ಲಿಂಕ್’ ಗೆ ಬಹುಪರಾಕ್ ಎಂದಿದ್ದರು.‘ಬ್ಲಿಂಕ್’ ಸಿನಿಮಾದ ಶೋಗಳು ಹೆಚ್ಚಾಗಿರುವ ಖುಷಿ ನಡುವೆಯೇ ಇದೀಗ ಈ ಸಿನಿಮಾ ವಿದೇಶದಲ್ಲಿಯೂ ತೆರೆಕಂಡಿದೆ. ಆಸ್ಟ್ರೇಲಿಯಾ, ಯುಎಸ್ ಹಾಗೂ ಐರ್ಲೆಂಡ್ ಗಳಲ್ಲಿ ‘ಬ್ಲಿಂಕ್’ ಸಿನಿಮಾ ಬಿಡುಗಡೆಯಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಯುಕೆ, ಯೂರೋಪ್​ನ ಕೆಲ ದೇಶಗಳು, ನ್ಯೂಜಿಲೆಂಡ್, ಯುಎಸ್, ಸಿಂಗಾಪುರ್, ಮಲೇಷಿಯಾ, ಜರ್ಮನ್, , ಕೆನಡಾ, ಫ್ರಾನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಗುತ್ತಿದೆಯಂತೆ. ಶ್ರೀನಿಧಿ ಬೆಂಗಳೂರು ನಿರ್ದೇಶನದ ‘ಬ್ಲಿಂಕ್’ ಚಿತ್ರಕ್ಕೆ ರವಿಚಂದ್ರ ಎ. ಜೆ ಬಂಡವಾಳ ಹೂಡಿದ್ದು,  ‘ದಿಯಾ’ ಖ್ಯಾತಿಕ ದೀಕ್ಷಿತ್ ಶೆಟ್ಟಿ, ಚೈತ್ರಾ ಆಚಾರ್, ಗೋಪಾಲ ದೇಶಪಾಂಡೆ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

Advertisement

Advertisement
Tags :
blinkLatestNewsMOVIEMOVIE THEATERNewsKarnatakaShow
Advertisement
Next Article