ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಡುಪಿ ಮುಸ್ಲಿಂ ವೆಲ್‌ಫೇರ್‌ನಿಂದ ಬೃಹತ್ ರಕ್ತದಾನ ಶಿಬಿರ

ರಕ್ತವನ್ನು ಪ್ರಾಯೋಗಾಲಯದಲ್ಲಿ ಸೃಷ್ಠಿ ಮಾಡಲು ಸಾಧ್ಯವಿಲ್ಲ. ಅದನ್ನು ಮನುಷ್ಯ ದಾನ ಮಾಡುವುದರಿಂದ ಮಾತ್ರ ಪಡೆಯಲು ಸಾಧ್ಯ. ಆದುದರಿಂದ ರಕ್ತದಾನ ಮೂಲಕ ಇನ್ನೊಬ್ಬರ ಪ್ರಾಣ ಉಳಿಸುವ ಕಾರ್ಯ ಮಾಡಬಹುದು ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
09:42 PM Feb 06, 2024 IST | Gayathri SG

ಉಡುಪಿ: ರಕ್ತವನ್ನು ಪ್ರಾಯೋಗಾಲಯದಲ್ಲಿ ಸೃಷ್ಠಿ ಮಾಡಲು ಸಾಧ್ಯವಿಲ್ಲ. ಅದನ್ನು ಮನುಷ್ಯ ದಾನ ಮಾಡುವುದರಿಂದ ಮಾತ್ರ ಪಡೆಯಲು ಸಾಧ್ಯ. ಆದುದರಿಂದ ರಕ್ತದಾನ ಮೂಲಕ ಇನ್ನೊಬ್ಬರ ಪ್ರಾಣ ಉಳಿಸುವ ಕಾರ್ಯ ಮಾಡಬಹುದು ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

Advertisement

ಉಡುಪಿ ಮುಸ್ಲಿಂ ವೆಲ್‌ಫೇರ್ ಅಸೋಸಿಯೇಶನ್ ವತಿಯಿಂದ ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಉಡುಪಿ ಜಾಮಿಯಾ ಮಸೀದಿ ಆವರಣದಲ್ಲಿ ಇಂದು ಏರ್ಪಡಿಸಲಾದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಉಡುಪಿ ಜಿಲ್ಲಾ ಸರ್ಜನ್ ಡಾ.ವೀಣಾ ಕುಮಾರಿ ಎಂ. ಮಾತನಾಡಿದರು. ಅಧ್ಯಕ್ಷತೆಯನ್ನು ಮುಸ್ಲಿಂ ವೆಲ್‌ಫೇರ್ ಅಸೋಸಿ ಯೇಶನ್ ಅಧ್ಯಕ್ಷ ಮುನೀರ್ ಅಹಮದ್ ವಹಿಸಿದ್ದರು. ಮಣಿಪಾಲದ ಬ್ಲಡ್ ಬ್ಯಾಂಕ್ ಹಿರಿಯ ನಿವಾಸಿ ಡಾ.ದೀಪ್, ಮಣಿಪಾಲ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ಲಾ ಪರ್ಕಳ, ಉಡುಪಿ ಜಾಮಿಯಾ ಮಸೀದಿ ಅಧ್ಯಕ್ಷ ರಿಯಾಝ್ ಅಹ್ಮದ್, ಸಾಮಾಜಿಕ ಕಾರ್ಯಕರ್ತ ಮುನೀರ್ ಕಲ್ಮಾಡಿ ಮುಖ್ಯ ಅತಿಥಿಗಳಾಗಿದ್ದರು.

Advertisement

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಎಂ.ಎ.ಗಫೂರ್, ಹಬೀಬ್ ಅಲಿ ಮೊದಲಾದಲಾದವರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ವಿ.ಎಸ್. ಉಮರ್ ಸ್ವಾಗತಿಸಿದರು. ಎಂ.ಇಕ್ಬಾಲ್ ಮನ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advertisement
Tags :
LatestNewsNewsKannadaUDUPIರಕ್ತದಾನ ಶಿಬಿರ
Advertisement
Next Article