ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ ದಂಡ ಹಾಕುತ್ತಿದೆ.
09:11 AM May 18, 2024 IST | Ashika S

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ ದಂಡ ಹಾಕುತ್ತಿದೆ.

Advertisement

11 ತಿಂಗಳಿನಲ್ಲಿ ಒಟ್ಟು 10.76 ಲಕ್ಷ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ದಂಡ ವಿಧಿಸಿ ಬರೋಬ್ಬರಿ 5.38 ಕೋಟಿ ರೂ. ಹಣವನ್ನು ವಸೂಲಿ ಮಾಡಿದೆ.

ಭದ್ರತೆ ಮತ್ತು ಸುರಕ್ಷತೆ ದೃಷ್ಟಿಯಿಂದ ಈ ನಿಯಮದ ಪ್ರಕಾರವೇ ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್‌ ಸಮರ್ಥನೆ ನೀಡಿದೆ.

Advertisement

ಪ್ರಯಾಣಿಕರು ಅವಧಿ ಮೀರಿ ನಿಲ್ದಾಣದಲ್ಲಿ ಇರಬಾರದು ಎಂಬ ನಿಯಮ ಮೊದಲಿನಿಂದಲೂ ಇದೆ. ಪ್ರಯಾಣಿಕರು ಹೆಚ್ಚು ಸಮಯ ನಿಲ್ದಾಣದಲ್ಲಿ ಕಳೆದರೆ ಇತರೆ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ. ಹೀಗಾಗಿ 20 ನಿಮಿಷಕ್ಕೂ ಹೆಚ್ಚಿನ ಸಮಯ ಕಳೆದರೆ ದಂಡ ವಿಧಿಸಲಾಗುತ್ತದೆ.

ಕೆಲವು ದಿನಗಳಹಿಂದೆ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ 20 ನಿಮಿಷಗಳ ಕಾಲ ನಿಂತಿದ್ದ ಯುವಕನಿಗೆ 50 ರೂ. ದಂಡ ಹಾಕಿತ್ತು. ಇದಾದ ಬಳಿಕ  ವಿಚಾರಗಳು ಬಯಲಿಗೆ ಬರುತ್ತಿದೆ.

Advertisement
Tags :
bengaluruBMRCLFINELatetsNewsNammaMetroNewsKarnataka
Advertisement
Next Article