ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ‌ ಲಾಂಗ್ ಬೀಸಿದ ಪುಡಿರೌಡಿಗಳು

ಕುಮಾರಸ್ವಾಮಿ ಲೇಔಟ್​ನ ಬಿಎಂಟಿಸಿ  ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ‌ ಪುಡಿರೌಡಿಗಳು ಲಾಂಗ್ ಬೀಸಿದ ಘಟನೆ  ಏಪ್ರಿಲ್‌ 4ರ ಮಧ್ಯರಾತ್ರಿ 12.30ರ ಸುಮಾರಿಗೆ ನಡೆದಿದೆ.
12:46 PM Apr 07, 2024 IST | Ashika S

ಬೆಂಗಳೂರು: ಕುಮಾರಸ್ವಾಮಿ ಲೇಔಟ್​ನ ಬಿಎಂಟಿಸಿ  ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ‌ ಪುಡಿರೌಡಿಗಳು ಲಾಂಗ್ ಬೀಸಿದ ಘಟನೆ  ಏಪ್ರಿಲ್‌ 4ರ ಮಧ್ಯರಾತ್ರಿ 12.30ರ ಸುಮಾರಿಗೆ ನಡೆದಿದೆ.

Advertisement

ಚಾಲಕ ನಾಗೇಂದ್ರ ಎಂಬುವವರಿಗೆ ತಲೆ, ಕಣ್ಣಿನ ಕೆಳಭಾಗ ಹಾಗೂ ಎಡಕೈಗೆ ಗಾಯವಾಗಿದೆ. ಇನ್ನು ಮಚ್ಚು ಬಿಸುತ್ತಾ ಒಡಿಸಿಕೊಂಡು ಬರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು,

ಬಿಎಂಟಿಸಿಯಲ್ಲಿ ಚಾಲಕನಾಗಿರುವ ನಾಗೇಂದ್ರ, ಅವರು ಏ.4ರಂದು ಮಾರ್ಗ ಸಂಖ್ಯೆ 15E/2ರಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಡರಾತ್ರಿ 15 ಇ ಬಸ್‌ ನಿಲ್ದಾಣದಲ್ಲಿ ಅಂದಿನ ಕರ್ತವ್ಯ ಮುಗಿಸಿ ಮಲಗಿದ್ದ ಕಂಡೆಕ್ಟರ್ ಹಾಗೂ ಡ್ರೈವರ್, ಬಸ್ ನಿಲ್ದಾಣಕ್ಕೆ ಬಂದ 4 ಜನ ಅಪರಿಚಿತರು ನಿಲ್ದಾಣದಲ್ಲಿ ಜೋರಾಗಿ ಕೂಗಾಡುತ್ತಿದ್ದರು.

Advertisement

ಆ ವೇಳೆ ನಾನು ಬಸ್‌ನಲ್ಲಿಯೇ ಕುಳಿತುಕೊಂಡು ಅವರಿಗೆ ಇಲ್ಲಿ ಕೂಗಾಡಬೇಡಿ ಎಂದಿದ್ದೆ. ಆಗ ಅವರಲ್ಲಿ ಒಬ್ಬ ನಾವು ಏನಾದರೂ ಮಾಡುತ್ತೇವೆ ನಿನಗೆ ಯಾಕಲೇ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ.

ಆಗ ಬಸ್‌ನಿಂದ ಕೆಳಗಡೆ ಇಳಿದು ಯಾಕಪ್ಪ ಆ ರೀತಿ ಬೈಯುತ್ತೀಯಾ ಎಂದು ಚಾಲಕ ಕೇಳಿದ್ದು, ಆವಾಗ ಚಾಲಕನ‌ ಮೇಲೆ ಕೈಗಳಿಂದ ಮುಖಕ್ಕೆ ಹಾಗೂ ಕುತ್ತಿಗೆಗೆ ಹಲ್ಲೆ ಮಾಡಿದ್ದಾನೆ. ಆತನ ಪಕ್ಕದಲ್ಲಿದ್ದ ಇನ್ನೊಬ್ಬನಿಂದ ಚಾಲಕನ ತಲೆಗೆ ಮಚ್ಚಿನಿಂದ ದಾಳಿ ನಡೆಸಿದ್ದು, ಮತ್ತೆ ಮಚ್ಚಿನಿಂದ ಹೊಡೆಯಲು ಬಂದಾಗ, ಚಾಲಕ ಹಾಗೂ ನಿರ್ವಾಹಕ ಅಲ್ಲಿಂದ ಓಡಿ‌ ಹೋಗಿದ್ದಾರೆ. ಬಳಿಕ‌ ಕಂಡಕ್ಟರ್ ಸಹಾಯದಿಂದ ವಾಸವಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದು, ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

Advertisement
Tags :
BMTCDRIVERLatetsNewsmiscreantsNewsKarnataka
Advertisement
Next Article