ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಶ್ಮೀರದಲ್ಲಿ ಮುಳುಗಿದ ದೋಣಿ; ನಾಲ್ವರು ಶಾಲಾ ಮಕ್ಕಳು ಜಲಸಮಾಧಿ

ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ಇಂದು (ಏಪ್ರಿಲ್‌ 16) ಬೆಳಗ್ಗೆ ದೋಣಿಯೊಂದು ಮುಳುಗಿದ್ದು, ನಾಲ್ವರು ಶಾಲಾ ಮಕ್ಕಳು ಸೇರಿ ಹಲವರು ಮಂದಿ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.
10:49 AM Apr 16, 2024 IST | Ashitha S

ಶ್ರೀನಗರ: ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ಇಂದು (ಏಪ್ರಿಲ್‌ 16) ಬೆಳಗ್ಗೆ ದೋಣಿಯೊಂದು ಮುಳುಗಿದ್ದು, ನಾಲ್ವರು ಶಾಲಾ ಮಕ್ಕಳು ಸೇರಿ ಹಲವರು ಮಂದಿ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.

Advertisement

ಬೆಳಗ್ಗೆ ಮಕ್ಕಳು ಸೇರಿ ಹಲವರು ಮಂದಿ ಸಂಚರಿಸುತ್ತಿದ್ದರು. ಇದೇ ವೇಳೆ ದೋಣಿಯು ಮಗುಚಿದೆ. ಹಲವು ಮಂದಿ ನೀರಿನಲ್ಲಿ ಮುಳುಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರು ಶಾಲಾ ಮಕ್ಕಳು ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಇದುವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿದೆ.  ಇನ್ನು ಅಗತ್ಯಕ್ಕಿಂತ ಹೆಚ್ಚಿನ ಜನ ದೋಣಿಯಲ್ಲಿದ್ದ ಕಾರಣ ದುರಂತ ಸಂಭವಿಸಿದೆಯೋ, ನೀರಿನ ಸೆಳವಿಗೆ ಸಿಲುಕಿ ಮಗುಚಿದೆಯೋ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಸ್ಥಳೀಯರೂ ನೆರವು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisement

Advertisement
Tags :
BoatcapsizesdeathindiajhelumNewsKarnataka
Advertisement
Next Article