For the best experience, open
https://m.newskannada.com
on your mobile browser.
Advertisement

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : ತಪ್ಪಿದ ಭಾರಿ ಅನಾಹುತ

ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್‌   ಯಾವುದೇ ಅನಾಹುತ ಸಂಭವಿಸಿಲ್ಲ.
09:02 AM Jul 07, 2024 IST | Nisarga K
ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ   ತಪ್ಪಿದ ಭಾರಿ ಅನಾಹುತ
ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ : ತಪ್ಪಿದ ಭಾರಿ ಅನಾಹುತ

ವಿಜಯಪುರ: ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್‌   ಯಾವುದೇ ಅನಾಹುತ ಸಂಭವಿಸಿಲ್ಲ.

Advertisement

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ನಸುಕಿನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟ ಸಂಭವಿಸುವ ಕೆಲವೇ ಸಮಯಕ್ಕೆ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ ಹೋಗಿದ್ದರು. ಪರಿಣಾಮ ಘಟನೆಯಲ್ಲಿ ಯಾವುದೇ ಜೀವಹಾನಿ ಆಗಿಲ್ಲ.

ಮೇಲಿಂದ ಮೇಲೆ ಬಾಯ್ಲರ್ ಸ್ಫೋಟಗೊಳ್ಳಲು ಕಳಪೆ ಗುಣಮಟ್ಟದ ಕಾಮಗಾರಿ ಪ್ರಮುಖ ಕಾರಣವೆಂದು ರೈತರು ದೂರುತ್ತಿದ್ದಾರೆ. ಅಲ್ಲದೇ ನುರಿತ ಕಂಪನಿಗಳು 55 ಕೋಟಿ ರೂ.ಗೆ ಕಾಮಗಾರಿ ಮಾಡಲು ಮುಂದೆ ಬಂದರೂ ಹಣ ಉಳಿಸುವ ನೆಪದಲ್ಲಿ ಅನನುಭವಿ ಕಂಪನಿಗೆ 50 ಕೋಟಿ ರೂ.ಗೆ ಬಾಯ್ಲರ್ ನಿರ್ಮಾಣದ ಯೋಜನೆಯ ಜವಾಬ್ದಾರಿ ನೀಡಿದ್ದೆ ಸರಣಿ ದುರ್ಘಟನೆಗಳಿಗೆ ಕಾರಣವೆಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Advertisement

Advertisement
Tags :
Advertisement