For the best experience, open
https://m.newskannada.com
on your mobile browser.
Advertisement

ಬಾಲಿವುಡ್​ನ ಹಿರಿಯ ನಟ ಮಿಥುನ್​ ಚಕ್ರವರ್ತಿ ಅವರಿಗೆ ಎದೆನೋವು: ಆಸ್ಪತ್ರೆಗೆ ದಾಖಲು

ಬಾಲಿವುಡ್​ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್​ ಚಕ್ರವರ್ತಿ  ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.
12:11 PM Feb 10, 2024 IST | Ashika S
ಬಾಲಿವುಡ್​ನ ಹಿರಿಯ ನಟ ಮಿಥುನ್​ ಚಕ್ರವರ್ತಿ ಅವರಿಗೆ ಎದೆನೋವು  ಆಸ್ಪತ್ರೆಗೆ ದಾಖಲು

ಕೋಲ್ಕತ್ತ: ಬಾಲಿವುಡ್​ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್​ ಚಕ್ರವರ್ತಿ  ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.

Advertisement

ಶನಿವಾರ  ಮುಂಜಾನೆ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿತು. ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಿಥುನ್ ಚಕ್ರವರ್ತಿ ಆರೋಗ್ಯದ ಬಗ್ಗೆ ಸೋಶೀಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಕುಟುಂಬದವರ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆಸ್ಪತ್ರೆ ಕಡೆಯಿಂದಲೂ ಯಾವುದೇ ಸುತ್ತೋಲೆ ಬಂದಿಲ್ಲ.

Advertisement

ಜನವರಿ ತಿಂಗಳಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ಮಿಥುನ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಮಾಡಲಾಯಿತು.

Advertisement
Tags :
Advertisement