For the best experience, open
https://m.newskannada.com
on your mobile browser.
Advertisement

ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ !

ಇಲ್ಲಿನ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆಯ ಇ-ಮೇಲ್​ಗಳು ಬಂದಿದೆ. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಬಂದಿದೆ. ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
01:32 PM May 14, 2024 IST | Ashitha S
ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

ದೆಹಲಿ: ಇಲ್ಲಿನ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆಯ ಇ-ಮೇಲ್​ಗಳು ಬಂದಿದೆ. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಬಂದಿದೆ. ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

Advertisement

ಏತನ್ಮಧ್ಯೆ, ಬೆದರಿಕೆ ಮೇಲ್‌ನ ಮೂಲವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ರಾಷ್ಟ್ರ ರಾಜಧಾನಿಯ ನಾಲ್ಕು ಆಸ್ಪತ್ರೆಗಳಿಗೆ ಪೊಲೀಸ್ ತಂಡಗಳನ್ನು ರವಾನಿಸಲಾಗಿದೆ.

ಭಾನುವಾರ ದೆಹಲಿಯ 10 ಆಸ್ಪತ್ರೆಗಳು ಮತ್ತು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಪೊಲೀಸರು ಬೆದರಿಕೆಯನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಮೇ 1 ರಂದು, ದೆಹಲಿ-ಎನ್‌ಸಿಆರ್‌ನ 150 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು.

Advertisement

Advertisement
Tags :
Advertisement