For the best experience, open
https://m.newskannada.com
on your mobile browser.
Advertisement

ಬಾಂಬ್ ಬೆದರಿಕೆ: ತನಿಖೆಗೆ ಇಂಟರ್​ಪೋಲ್ ನೆರವು ಕೋರಿದ ಪೊಲೀಸರು

ನಗರದ ಸುತ್ತಮುತ್ತಲಿನ 68 ಶಾಲೆಗಳಿಗೆ ನಕಲಿ ಬಾಂಬ್ ಬೆದರಿಕೆ ಇಮೇಲ್ ಕೇಸ್‌ ಕುರಿತು ಪೊಲೀಸರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 27 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
05:23 PM Dec 05, 2023 IST | Ramya Bolantoor
ಬಾಂಬ್ ಬೆದರಿಕೆ  ತನಿಖೆಗೆ ಇಂಟರ್​ಪೋಲ್ ನೆರವು ಕೋರಿದ ಪೊಲೀಸರು

ಬೆಂಗಳೂರು: ನಗರದ ಸುತ್ತಮುತ್ತಲಿನ 68 ಶಾಲೆಗಳಿಗೆ ನಕಲಿ ಬಾಂಬ್ ಬೆದರಿಕೆ ಇಮೇಲ್ ಕೇಸ್‌ ಕುರಿತು ಪೊಲೀಸರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 27 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ಕೋರಿ ಕೇಂದ್ರೀಯ ತನಿಖಾ ದಳದ (CBI) ಇಂಟರ್‌ಪೋಲ್ ವಿಭಾಗಕ್ಕೆ ಪತ್ರ ಬರೆಯಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ಇಂದು (ಡಿ.05) ಹೇಳಿದ್ದಾರೆ.

Advertisement

ಪ್ರಗತಿ ಪರಿಶೀಲನೆಗಾಗಿ ಎಲ್ಲಾ ತನಿಖಾ ಅಧಿಕಾರಿಗಳ ಸಭೆ ನಡೆಸಲಾಗಿದೆ. ಕಳೆದ ವರ್ಷ ಕೂಡ ಇದೇ ರೀತಿಯ ಬೆದರಿಕೆ ಸಂದೇಶಗಳು ಶಾಲೆಗಳಿಗೆ ಬಂದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿ ಕೆಲವು ಬಾಲಾಪರಾಧಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣಗಳಲ್ಲಿ ಕುರಿತು ತನಿಖೆ ಸತ್ಯಾಂಶವನ್ನು ತಿಳಿಯಲು ನಾವು ಎಲ್ಲಾ ತನಿಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇವೆ.

ಆರೋಪಿಯು beeble.com ನ ವಿವಿಧ ಇಮೇಲ್ ಐಡಿಗಳಿಂದ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ. ಬೆಂಗಳೂರು ಪೊಲೀಸರು ಆ ಕಂಪನಿಗೆ ಪತ್ರ ಬರೆದು ಅವರಿಂದ ಮಾಹಿತಿ ಪಡೆದುಕೊಂಡಿದ್ದೇವೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

Advertisement

ಪ್ರಕರಣದ ಬಗ್ಗೆ ಮಾಹಿತಿ ಕೋರಿ ಸಿಬಿಐನ ಇಂಟರ್‌ಪೋಲ್ ವಿಭಾಗಕ್ಕೆ ಪೊಲೀಸರು ಪತ್ರ ಬರೆದಿದ್ಧೆವೆ. ಅಮೆರಿಕ, ಜರ್ಮನಿ, ಮಲೇಷ್ಯಾ ಮತ್ತು ಇತರ ದೇಶಗಳ ಶಾಲೆಗಳಿಗೆ ಕೂಡ ಇದೇ ರೀತಿಯ ಬೆದರಿಕೆ ಇಮೇಲ್‌ಗಳು ಬಂದಿದ್ದವು ಎಂದು ಪೊಲೀಸ್ ಆಯುಕ್ತರು ಹೇಳಿದರು.

Advertisement
Tags :
Advertisement