ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಾಂಬ್‌ ಸ್ಫೋಟ; ಮಕ್ಕಳು ಸೇರಿದಂತೆ ಏಳು ಮಂದಿಗೆ ಗಾಯ

ಪೇಶಾವರ ಪಬ್ಲಿಕ್ ಸ್ಕೂಲ್ ಬಳಿ ಬಾಂಬ್ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಶಾವರದ ವಾರ್ಸಾಕ್ ರಸ್ತೆಯಲ್ಲಿ ನಡೆದಿದೆ.
02:32 PM Dec 05, 2023 IST | Ramya Bolantoor

ಇಸ್ಲಾಮಾಬಾದ್ : ಪೇಶಾವರ ಪಬ್ಲಿಕ್ ಸ್ಕೂಲ್ ಬಳಿ ಬಾಂಬ್ ಸ್ಫೋಟ ಸಂಭವಿಸಿ ಮಕ್ಕಳು ಸೇರಿದಂತೆ ಏಳು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಶಾವರದ ವಾರ್ಸಾಕ್ ರಸ್ತೆಯಲ್ಲಿ ನಡೆದಿದೆ. ದಾಳಿಯ ಹಿಂದೆ ಟಿಟಿಪಿ ಕೈವಾಡ ಇದೆ ಎಂದು ಶಂಕಿಸಲಾಗಿದೆ. ಗಾಯಗೊಂಡವರನ್ನು ಲೇಡಿ ರೀಡಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ರಸ್ತೆಯಲ್ಲಿ ಹಾಕಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

ಸ್ಫೋಟಕ್ಕೆ ಬಳಸಲಾದ ಸ್ಫೋಟಗಳು 4 ಕಿಲೋಗ್ರಾಂಗಳಷ್ಟು ತೂಕವಿದ್ದು, ರಸ್ತೆಬದಿಯಲ್ಲಿ ಹೂತಿಡಲಾಗಿತ್ತು. ರಸ್ತೆ ಬದಿಯ ಸಿಮೆಂಟ್‌ ಬ್ಲಾಕ್‌ನಲ್ಲಿ ಸ್ಫೋಟಕಗಳನ್ನು ಬಚ್ಚಿಡಲಾಗಿತ್ತು ಎಂದು ತಿಳಿದು ಬಂದಿದೆ. ಪೊಲೀಸರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

Advertisement

Advertisement
Tags :
bombBreakingNewscrimeLatestNewsNewsKannadaPOLICEಇಸ್ಲಾಮಾಬಾದ್‌
Advertisement
Next Article