ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
03:19 PM Apr 15, 2024 IST | Nisarga K
ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ಮಂಗಳೂರು: ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.

Advertisement

ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕಾಂಕ್ರೀಟ್‌ ಮಿಕ್ಸ್‌ ಹಾಕುವಾಗ ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದೆ. ಪರಿಣಾಮ ಸೇತುವೆ ಸಾಮಾಗ್ರಿಯ ಮಧ್ಯೆ ಓರ್ವ ಕಾರ್ಮಿಕ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಉಳಿದ ಆರು ಮಂದಿಯನ್ನು ಸ್ಥಳೀಯರು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

Advertisement

Advertisement
Tags :
bridgeCOLLAPSEinjuredLatestNewsmangaluruNewsKarnatakaPUTTURworkers
Advertisement
Next Article