For the best experience, open
https://m.newskannada.com
on your mobile browser.
Advertisement

ವೇಲ್ಸ್ ರಾಜಕುಮಾರಿ ಕೇಟ್ ಮಿಡಲ್ಟನ್​ಗೆ ಕ್ಯಾನ್ಸರ್​​

ವೇಲ್ಸ್ ರಾಜಕುಮಾರಿ ಕೇಟ್ ಮಿಡಲ್ಟನ್  ಕ್ಯಾನ್ಸರ್‌ಗೆ ಕಿಮೋಥೆರಪಿಗೆ ಒಳಗಾಗುತ್ತಿರುವುದಾಗಿ ಶುಕ್ರವಾರ ಬಹಿರಂಗಪಡಿಸಿದ್ದಾರೆ. ವೀಡಿಯೊ ಸಂದೇಶದಲ್ಲಿ ಮಾಹಿತಿ ನೀಡಿದ ಅವರು, ‘ನಾನು ಚೆನ್ನಾಗಿದ್ದೇನೆ ಮತ್ತು ಪ್ರತಿದಿನ ಸುಧಾರಿಸಿಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ.
01:06 PM Mar 23, 2024 IST | Ashitha S
ವೇಲ್ಸ್ ರಾಜಕುಮಾರಿ ಕೇಟ್ ಮಿಡಲ್ಟನ್​ಗೆ ಕ್ಯಾನ್ಸರ್​​

ನವದೆಹಲಿ: ವೇಲ್ಸ್ ರಾಜಕುಮಾರಿ ಕೇಟ್ ಮಿಡಲ್ಟನ್  ಕ್ಯಾನ್ಸರ್‌ಗೆ ಕಿಮೋಥೆರಪಿಗೆ ಒಳಗಾಗುತ್ತಿರುವುದಾಗಿ ಶುಕ್ರವಾರ ಬಹಿರಂಗಪಡಿಸಿದ್ದಾರೆ. ವೀಡಿಯೊ ಸಂದೇಶದಲ್ಲಿ ಮಾಹಿತಿ ನೀಡಿದ ಅವರು, ‘ನಾನು ಚೆನ್ನಾಗಿದ್ದೇನೆ ಮತ್ತು ಪ್ರತಿದಿನ ಸುಧಾರಿಸಿಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ.

Advertisement

ಈ ವರ್ಷದ ಜನವರಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದು ಅವರ ಆರೋಗ್ಯದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿತ್ತು. ಜನವರಿಯಲ್ಲಿ, ಕೇಟ್ ಮಿಡಲ್ಟನ್ ಲಂಡನ್‌ನಲ್ಲಿ ಹೊಟ್ಟೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದನ್ನು ಆರಂಭದಲ್ಲಿ ಕ್ಯಾನ್ಸರ್ ಅಲ್ಲ ಎಂದು ಭಾವಿಸಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿತ್ತು. ಆದರೆ ಶಸ್ತ್ರಚಿಕಿತ್ಸೆಯ ನಂತರದ ವೈದ್ಯಕೀಯ ಪರೀಕ್ಷೆಗಳು ಕೇಟ್ ಮಿಡಲ್ಟನ್ ಕ್ಯಾನ್ಸರ್​ನಿಂದ ಬಳಲುತ್ತಿರುವುದನ್ನು ದೃಢಪಡಿಸಿದ್ದವು.

ವೀಡಿಯೊ ಸಂದೇಶದಲ್ಲಿ ಕೇಟ್ ಮಿಡಲ್ಟನ್, ‘ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿ ನಿಮ್ಮ ಬೆಂಬಲ ಮತ್ತು ಶುಭ ಹಾರೈಕೆಗಳಿಗಾಗಿ ನಾನು ವೈಯಕ್ತಿಕವಾಗಿ ಧನ್ಯವಾದ ಹೇಳಲು ಬಯಸುತ್ತೇನೆ. ನಮ್ಮ ಇಡೀ ಕುಟುಂಬಕ್ಕೆ ಕಳೆದ ಎರಡು ತಿಂಗಳು ಬಹಳಷ್ಟು ಕಷ್ಟಕರ ದಿನಗಳಾಗಿವೆ. ಆದರೆ ಅದ್ಭುತ ವೈದ್ಯಕೀಯ ತಂಡ ನನ್ನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಅದಕ್ಕಾಗಿ ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ಹೊಟ್ಟೆಯ ಶಸ್ತ್ರ ಚಿಕಿತ್ಸೆ ಮಾಡಿದಾಗ ಕ್ಯಾನ್ಸರ್ ಪತ್ತೆಯಾಗಿರಲಿಲ್ಲ’ ಎಂದು ಹೇಳಿದ್ದಾರೆ.

Advertisement

Advertisement
Tags :
Advertisement