ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ

ಇಂದಿನಿಂದ (ಜ.31) ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಲೋಕಸಭೆ ಚುನಾವಣೆ 2024 ರ ಮೊದಲು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅಧಿವೇಶನ ಇದಾಗಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇಂದು ಅಂದರೆ ಮಂಗಳವಾರ ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
10:08 AM Jan 31, 2024 IST | Ashitha S

ನವದೆಹಲಿ: ಇಂದಿನಿಂದ (ಜ.31) ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಲೋಕಸಭೆ ಚುನಾವಣೆ 2024 ರ ಮೊದಲು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅಧಿವೇಶನ ಇದಾಗಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇಂದು ಅಂದರೆ ಬುಧವಾರ ಆರಂಭವಾಗಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Advertisement

ಪ್ರಸಕ್ತ ಲೋಕಸಭೆಯ ಕೊನೆಯ ಅಧಿವೇಶನ ಇದಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ನೂತನ ಸರ್ಕಾರ ಅಧಿಕಾರ ವಹಿಸಿಕೊಂಡ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ.

ಇನ್ನು ಅಧ್ಯಕ್ಷರು ಮೊದಲ ಬಾರಿಗೆ ಹೊಸ ಸಂಸತ್ತನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ರಾಷ್ಟ್ರಪತಿ ಭಾಷಣದೊಂದಿಗೆ ಅಧಿವೇಶನ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವು ಹೊಸ ಸಂಸತ್ತಿನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 10.15ಕ್ಕೆ ಮಾಧ್ಯಮಗಳೊಂದಿಗೆ ಮಾತನಾಡಲಿದ್ದಾರೆ.

Advertisement

17ನೇ ಲೋಕಸಭೆಯ 15ನೇ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಚುನಾವಣೆಗೂ ಮುನ್ನ ನಡೆಯುತ್ತಿರುವ ಈ ಸರ್ಕಾರದ ಕೊನೆಯ ಸಂಸತ್ ಅಧಿವೇಶನ ಇದಾಗಿದೆ. ಈ ಅಧಿವೇಶನದಲ್ಲಿ ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶಕ್ಕೆ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.

 

Advertisement
Tags :
Budget 2024GOVERNMENTindiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿಬಜೆಟ್ಬೆಂಗಳೂರು
Advertisement
Next Article