For the best experience, open
https://m.newskannada.com
on your mobile browser.
Advertisement

ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ !

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ವರ್ಷದ ಆಯವ್ಯಯ ಮಂಡನೆ ಮಾಡುತ್ತಿದೆ. ಕರ್ನಾಟಕ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳ ವ್ಯಕ್ತವಾಗಿದೆ. ಉಚಿತ ಗ್ಯಾರೆಂಟಿ ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿ, ಲೋಕಸಭಾ ಚುನಾವಣೆ ಸವಾಲಿನ ನಡುವೆ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್‌ನಲ್ಲಿ ನಿರೀಕ್ಷೆಯಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಲಾಗಿದ.ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನ ನೀಡಿದ್ದರೆ, ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
11:42 AM Feb 16, 2024 IST | Ashitha S
ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ವರ್ಷದ ಆಯವ್ಯಯ ಮಂಡನೆ ಮಾಡುತ್ತಿದೆ. ಕರ್ನಾಟಕ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳ ವ್ಯಕ್ತವಾಗಿದೆ. ಉಚಿತ ಗ್ಯಾರೆಂಟಿ ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿ, ಲೋಕಸಭಾ ಚುನಾವಣೆ ಸವಾಲಿನ ನಡುವೆ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್‌ನಲ್ಲಿ ನಿರೀಕ್ಷೆಯಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಲಾಗಿದ.ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನ ನೀಡಿದ್ದರೆ, ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

Advertisement

ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕೋಟಿ ಕೋಟಿ ರೂಪಾಯಿ ಅನುದಾನಗಳ ಜೊತೆಗೆ ವಸತಿ ಸಾಲೆ, ಕಡ್ಡಿಮೆ ಬಡ್ಡಿ ಸಾಲ ಸೇರಿದಂತೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಈ ಬಾರಿಯ ಬಜೆಟ್‌ನಲ್ಲಿ 393 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

ಕರ್ನಾಟಕದಲ್ಲಿನ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನದ ಜೊತಗೆ ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇನ್ನು ಜೈನ ಸಮುದಾಯ ಅಭಿವೃದ್ಧಿ ಹಾಗೂ ಸಮುದಾಯದ ಬೇಡಿಕೆಗೆ 50 ಕೋಟಿ ರೂಪಾಯಿ ಮೀಸಲಿಡಲಾಗಿದೆ.

Advertisement

50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ರಾಜ್ಯದಲ್ಲಿ ಆರಂಭಿಸಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇನ್ನು 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭಿಸಲು ಈ ಬಜೆಟ್‌ನಲ್ಲಿ ನಿರ್ಧರಿಸಲಾಗಿದೆ. ಇದರ ಜೊತೆಗೆ ನರ್ಸಿಂಗ್ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಆರಂಭಿಸಲಾಗಿದೆ. ಈ ವಿದ್ಯಾರ್ಥಿಗಳ ಶುಲ್ಕ ಭರಿಸುವ ಯೋಜನೆ ಮತ್ತೆ ಆರಂಭಿಸಲು ಚಾಲನೆ ನೀಡಲಾಗಿದೆ. ಲಿಂಗತ್ವ ಅಲ್ಪಸಖ್ಯಾತರ ಬದುಕನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂಗಳಿಂದ 1,200ಕ್ಕೆ ಹೆಚ್ಚಿಸಲಾಗುತ್ತದೆ.

Advertisement
Tags :
Advertisement