For the best experience, open
https://m.newskannada.com
on your mobile browser.
Advertisement

ಮಂಗಳೂರು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮತ್ತೊಬ್ಬ ಬಸ್ ಮಾಲಕ !

ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಂಗಳೂರಿನಲ್ಲಿ ನಡೆದಿದೆ.
05:34 PM Feb 28, 2024 IST | Ashitha S
ಮಂಗಳೂರು  ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮತ್ತೊಬ್ಬ ಬಸ್ ಮಾಲಕ

ಮಂಗಳೂರು: ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಂಗಳೂರಿನಲ್ಲಿ ನಡೆದಿದೆ.

Advertisement

ಮೃತರನ್ನು ಬಜಾಲ್‌ ನಿವಾಸಿ ಪ್ರಜ್ವಲ್‌ ಡಿ. (35) ಎಂದು ತಿಳಿದು ಬಂದಿದೆ. ಇವರು ಭವಾನಿ ಬಸ್‌ನ ಮಾಲಕರಾಗಿದ್ದ ದಿ| ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್‌ನ‌ಲ್ಲಿರುವ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಇವರ ಸಹೋದರ ಬಸ್‌ನ ಮಾಲಕ ರಾಗಿದ್ದರು. ಪ್ರಜ್ವಲ್‌ ಅದೇ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Advertisement
Tags :
Advertisement