For the best experience, open
https://m.newskannada.com
on your mobile browser.
Advertisement

ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಬಸ್​ ಪಲ್ಟಿ : 20 ಪ್ರಯಾಣಿಕರಿಗೆ ಗಾಯ

ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಸೇತುವೆಯಿಂದ ಬಸ್ ಪಲ್ಟಿಯಾಗಿ 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರದಲ್ಲಿ ನಡೆದಿದೆ.
09:15 AM Apr 30, 2024 IST | Chaitra Kulal
ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಬಸ್​ ಪಲ್ಟಿ   20 ಪ್ರಯಾಣಿಕರಿಗೆ ಗಾಯ

ಒಡಿಶಾ: ಮದುವೆಯಿಂದ ಹಿಂತಿರುಗುತ್ತಿದ್ದ ವೇಳೆ ಸೇತುವೆಯಿಂದ ಬಸ್ ಪಲ್ಟಿಯಾಗಿ 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರದಲ್ಲಿ ನಡೆದಿದೆ.

Advertisement

ಬಸ್​ ನಲ್ಲಿ 10 ಮಹಿಳೆಯರು ಮತ್ತು 7 ಮಕ್ಕಳು ಸೇರಿದಂತೆ 35 ಕ್ಕೂ ಹೆಚ್ಚು ಜನರನ್ನು ಹೊತ್ತು ಸಾಗಿಸುತ್ತಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ.

ಬಸ್ ಧನುರಬೆಳರಿಯಲ್ಲಿ ಮದುವೆ ಕಾರ್ಯಕ್ರಮದಿಂದ ಬಲಿಕುಡದ ಬೂದಿಸಾಹಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕೂಡಲೇ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ಸದ್ಯ ಗಾಯಾಳುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Tags :
Advertisement