For the best experience, open
https://m.newskannada.com
on your mobile browser.
Advertisement

ಪಾಕಿಸ್ಥಾನ ಪರ ಘೋಷಣೆ ಹಿನ್ನೆಲೆ; ವಿಜಯೇಂದ್ರ ಪ್ರತಿಕ್ರಿಯೆ

ಇಂದು ರಾಜ್ಯಸಭೆ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೇಸ್‌ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು ಈ ವೇಳೆ ಗೆಲುವು ಸಾಧಿಸಿ ಕಾಂಗ್ರೇಸ್‌ ನ ಹುಸೇರ್‌ ನಾಸೀರ್‌ ಬೆಂಬಲಿಗರು ವಿಧಾನಸೌದದಲ್ಲಿ ಪಾಕ್‌ ಪರ ಘೋಷಣೆ ಕೂಗುವುದರ ಮೂಲಕ ಅವರ ಉದ್ಧಟತನ ತೋರಿಸಿದ್ದಾರೆ. ಈ ಕರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.
11:40 AM Feb 28, 2024 IST | Nisarga K
ಪಾಕಿಸ್ಥಾನ ಪರ ಘೋಷಣೆ ಹಿನ್ನೆಲೆ  ವಿಜಯೇಂದ್ರ ಪ್ರತಿಕ್ರಿಯೆ
ಪಾಕಿಸ್ಥಾನ ಪರ ಘೋಷಣೆ ಹಿನ್ನೆಲೆ; ವಿಜೇಂದ್ರ ಪ್ರತಿಕ್ರಿಯೆ

ಬೆಂಗಳೂರು:  ಇಂದು ರಾಜ್ಯಸಭೆ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೇಸ್‌ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು ಈ ವೇಳೆ ಗೆಲುವು ಸಾಧಿಸಿ ಕಾಂಗ್ರೇಸ್‌ ನ ಹುಸೇರ್‌ ನಾಸೀರ್‌ ಬೆಂಬಲಿಗರು ವಿಧಾನಸೌದದಲ್ಲಿ ಪಾಕ್‌ ಪರ ಘೋಷಣೆ ಕೂಗುವುದರ ಮೂಲಕ ಅವರ ಉದ್ಧಟತನ ತೋರಿಸಿದ್ದಾರೆ. ಈ ಕರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.

Advertisement

"ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲಲ್ಲಿ ಕಟ್ಟಿ ಕೊಂಡಿರಬಹುದು ಎಂದು ಅಂದಾಜಿಸಲು ಇಂದಿನ ಘಟನೆ ಸಾಕ್ಷಿ ಒದಗಿಸಿದೆ."

ರಾಜ್ಯ ಸಭೆಗೆ ಆಯ್ಕೆಮಾಡಿ ಕಳುಹಿಸಿರುವ ಸೈಯದ್ ನಾಸೀರ್ ಹುಸೇನ್ ಹಿಂದೆ ಇರುವ ಬೆಂಬಲಿಗರು ಪಾಕಿಸ್ತಾನಿ ಬೆಂಬಲಿತ ಉಗ್ರರೇ ಇರಬೇಕು, 'ತನ್ನನು ರಕ್ಷಿಸಲು ತಮ್ಮ ಮನಃಸ್ಥಿತಿಯ ಕಾಂಗ್ರೆಸ್ ಸರ್ಕಾರ ಇರುವಾಗ ನಾವ್ಯಾರಿಗೆ ಹೆದರಬೇಕು' ಎಂಬ ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿ ನೀಚರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು. ಸಾಕ್ಷಿಗಳೆಲ್ಲವೂ ಕಣ್ಣೆದುರಿಗೇ ಇರುವಾಗ  ದೇಶ ವಿರೋಧಿಗಳನ್ನು ರಕ್ಷಿಸಲು ಯತ್ನಿಸುವ ಪ್ರಯತ್ನ ನಡೆದರೆ ಮುಂದಾಗುವ ಪರಿಣಾಮಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆಯಾಗಲಿದೆ.

Advertisement

ನಮ್ಮ ಮುಂದಿನ ಹೋರಾಟ  “ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನ ಸೌಧ ಬಿಟ್ಟು ತೊಲಗಿ” ಎಂದು ಎಕ್ಸ್‌ ನಲ್ಲಿ ತಮ್ಮ ಪ್ರತಿಕ್ರಿಯೆ ನೀಡುವುದರ ಮೂಲಕ ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Tags :
Advertisement