ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆಫೆ ಸ್ಫೋಟ ಕೇಸ್: ಆರೋಪಿ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಎನ್‌ಐಎ

ನಗರದಲ್ಲಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ಎನ್‌ಐಎ ತೀವ್ರಗೊಳಿಸಿದೆ. ಈ ಮಧ್ಯೆ ಬಾಂಬರ್ ಫೋಟೋ ಬಿಡುಗಡೆ ಮಾಡಿರುವ ಎನ್‌ಐಎ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.
07:47 PM Mar 06, 2024 IST | Ashika S

ಬೆಂಗಳೂರು: ನಗರದಲ್ಲಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ಎನ್‌ಐಎ ತೀವ್ರಗೊಳಿಸಿದೆ. ಈ ಮಧ್ಯೆ ಬಾಂಬರ್ ಫೋಟೋ ಬಿಡುಗಡೆ ಮಾಡಿರುವ ಎನ್‌ಐಎ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.

Advertisement

ಪ್ರಕರಣದ ತನಿಖೆ ವಹಿಸಿಕೊಳ್ಳುವ ಮುನ್ನವೇ ಸಿಸಿಬಿ ನಡೆಸಿದ್ದ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿತ್ತು. ಇದೀಗ ಆ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ತಿಳಿದರೆ ಕೂಡಲೇ 080-29510900, 8904241100 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ಎನ್ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ರಾಷ್ಟ್ರೀಯ ತನಿಖಾ ದಳ ಎನ್‌ಐಎ ಅಧಿಕಾರಿಗಳು ಮಂಗಳವಾರ ಬೆಂಗಳೂರು, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ, ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬಿಜು ಅಬ್ರಹಾಂ ಹಾಗೂ ಅತ್ತಾವರ ಗ್ರಾಮದ ನಬೀದ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

Advertisement

Advertisement
Tags :
BENGALORELatetsNewsNewsKannadaರಾಮೇಶ್ವರಂ ಕೆಫೆ
Advertisement
Next Article