ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

 ಕಾರು- ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಹಂಪನಕಟ್ಟೆ ಬಳಿ ಇಂದು ನಡೆದಿದೆ.
08:05 PM Apr 21, 2024 IST | Nisarga K
 ಕಾರು- ರಿಕ್ಷಾ ನಡುವೆ ಅಪಘಾತ : ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಉಡುಪಿ: ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಹಂಪನಕಟ್ಟೆ ಬಳಿ ಇಂದು ನಡೆದಿದೆ.
ಗಂಭೀರ ಗಾಯಗೊಂಡ ಚಾಲಕನನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಹಂಪನಕಟ್ಟೆಯಿಂದ ಸಂತೆಕಟ್ಟೆ ಕಡೆಗೆ ತೆರಳುತ್ತಿದ್ದು, ಕಾರು ಸಂತೆಕಟ್ಟೆಯಿಂದ ಹಂಪನಕಟ್ಟೆ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಮತ್ತು ರಿಕ್ಷಾ ನಜ್ಜುಗುಜ್ಜಾಗಿದೆ.

Advertisement

Advertisement
Tags :
ACCIDENTAUTOCARDRIVERinjuredLatestNewsNewsKarnatakaUDUPI
Advertisement
Next Article