For the best experience, open
https://m.newskannada.com
on your mobile browser.
Advertisement

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
07:56 PM May 19, 2024 IST | Ashika S
ಬೈಕಿಗೆ ಡಿಕ್ಕಿ ಹೊಡೆದ ಕಾರು  ಓರ್ವ ಸಾವು

ಬೆಂಗಳೂರು: ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಸುಬ್ರಮಣ್ಯ ನಗರದ ವಿನಯ್​​ (32) ಮೃತ ಬೈಕ್​ ಸವಾರ. ಬೈಕ್​ನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.

ಕಾರ್​​ ಚಾಲಕನೋರ್ವ ಮೊದಲು ವೇಗವಾಗಿ ಬಂದು ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಹಿಂದಿನಿಂದ ಬಂದು ಬೈಕ್​ಗೆ ಡಿಕ್ಕಿ ಹೊಡೆದಿದ್ದಾನೆ. ಕಾರ್​ ಗುದ್ದಿದ ರಭಸಕ್ಕೆ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Advertisement

ಸದ್ಯ ಕಾರು ​ ಚಾಲಕ ಹರಿನಾಥ್​​ನನ್ನು ಮಲ್ಲೇಶ್ವರಂ ಟ್ರಾಫಿಕ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement
Tags :
Advertisement