For the best experience, open
https://m.newskannada.com
on your mobile browser.
Advertisement

ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
03:21 PM Mar 23, 2024 IST | Ashika S
ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು  ಓರ್ವ ಸಾವು

ಮಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

Advertisement

ಮೃತರನ್ನು ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಮಿತ್ ಶೆಟ್ಟಿಯವರ ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಭಾಗವಹಿಸಿದ ಬಳಿಕ ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
Advertisement