For the best experience, open
https://m.newskannada.com
on your mobile browser.
Advertisement

ಕಾರು-ಲಾರಿ ಮಧ್ಯೆ ಅಪಘಾತ: ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವು

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
03:28 PM Jan 20, 2024 IST | Gayathri SG
ಕಾರು ಲಾರಿ ಮಧ್ಯೆ ಅಪಘಾತ  ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Advertisement

ಮೃತ ವ್ಯಕ್ತಿ ಚಿತ್ರದುರ್ಗ ಮುನ್ಸಿಪಲ್ ಕಾಲೋನಿಯ 5ನೇ ಕ್ರಾಸ್ ನಿವಾಸಿ ವಿಶಾಲ್ (28). ಇವರು ಹೊಳಲ್ಕೆರೆಯ ಕೃಷಿ ಇಲಾಖೆಯಲ್ಲಿ ಟೆಕ್ನಿಕಲ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ನಾಳೆಯೇ ಇವರ ಎಂಗೇಜ್ಮೆಂಟ್ ಇತ್ತು. ಇಂದು ಶನಿವಾರ ನಿಮಿತ್ತ ಹೊಳಲ್ಕೆರೆ ರಸ್ತೆಯಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

Advertisement
Tags :
Advertisement