For the best experience, open
https://m.newskannada.com
on your mobile browser.
Advertisement

ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ

ರಾಜ್ಯಾದ್ಯಂತ ಲೋಕಸಭಾ ಚುನಾವಣೆ ಮತದಾನ ಭರದಿಂದ ಸಾಗುತ್ತಿದ್ದು, ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಂದುವರಿದದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದ್ದಂತೆ ಮತಗಟ್ಟೆಗಳಲ್ಲಿ ನಿಲ್ಲದಂತಾಗುತ್ತಿದೆ.
12:43 PM Apr 26, 2024 IST | Ashitha S
ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನ

ಬೆಂಗಳೂರು: ರಾಜ್ಯಾದ್ಯಂತ ಲೋಕಸಭಾ ಚುನಾವಣೆ ಮತದಾನ ಭರದಿಂದ ಸಾಗುತ್ತಿದ್ದು, ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಂದುವರಿದದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದ್ದಂತೆ ಮತಗಟ್ಟೆಗಳಲ್ಲಿ ನಿಲ್ಲದಂತಾಗುತ್ತಿದೆ.

Advertisement

ಬಿಸಿಲಿನ ಝಳ ಹಾಗೂ ಸುಸ್ತಾಗಿ ಮತದಾನ ಮಾಡಲು ಬಂದ ಮಹಿಳೆಗೆ ಹೃದಯ ಸ್ತಂಭನವಾದ ಘಟನೆ ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ನಡೆದಿದೆ. ಮತಗಟ್ಟೆಗೆ ಬಂದಿದ್ದ ಮಹಿಳೆ ಬಾಯಾರಿದೆ ನೀರು ಕುಡಿಯಲು ಹೋದಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ.

ಕೂಡಲೇ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಹೃದಯ ಸ್ತಂಭನದಿಂದ ಕುಸಿದು ಬಿದ್ದ ಮಹಿಳೆಯನ್ನು ಪರೀಕ್ಷಿಸಿದ್ದು, ಚಿಕಿತ್ಸೆ ನೀಡಿ ಪ್ರಾಣವನ್ನು ಉಳಿಸಿದ್ದಾರೆ.

Advertisement

Advertisement
Tags :
Advertisement