For the best experience, open
https://m.newskannada.com
on your mobile browser.
Advertisement

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್

ಎಂಟು ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವಲ್ಲಿ ಕಾನೂನು ಉಲ್ಲಂಘಿಸಿರುವ ಆರೋಪ ಹಿನ್ನೆಲೆಯಲ್ಲಿ ಸೋಶಿಯಲ್​ ಮೀಡಿಯಾ ಸ್ಟಾರ್ ಸೋನುಗೌಡ ವಿರುದ್ಧ ದೂರು ದಾಖಲಾಗಿದೆ.
10:09 AM Mar 22, 2024 IST | Ashitha S
ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್

ಬೆಂಗಳೂರು: ಎಂಟು ವರ್ಷದ ಬಾಲಕಿಯನ್ನು ದತ್ತು ತೆಗೆದುಕೊಳ್ಳುವಲ್ಲಿ ಕಾನೂನು ಉಲ್ಲಂಘಿಸಿರುವ ಆರೋಪ ಹಿನ್ನೆಲೆಯಲ್ಲಿ ಸೋಶಿಯಲ್​ ಮೀಡಿಯಾ ಸ್ಟಾರ್ ಸೋನುಗೌಡ ವಿರುದ್ಧ ದೂರು ದಾಖಲಾಗಿದೆ.

Advertisement

ಹೌದು. . ಸೋನು ಶ್ರೀನಿವಾಸ್‌ ಗೌಡ ಅವರು ಮಗು ದತ್ತು ಪಡೆದಿರುವುದಾಗಿ ಇತ್ತೀಚೆಗೆ ಹೇಳಿಕೊಂಡಿದ್ದರು. 6 ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ಮಗು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಇನ್ನು ‘ನಾನು ಅವಳ ಅಮ್ಮನ ಬಳಿ ದತ್ತು ಕೊಡುವಂತೆ ಕೇಳಿದೆ. ಇದನ್ನು ಕೇಳಿ ಅವಳ ತಾಯಿ ರಾಯಚೂರಿಗೆ ಹೋದರು. ಸೇವಂತಿಗೆ ಜ್ವರ ಬಂದಿತ್ತು. ಫೋನ್ ಮೂಲಕ ಸೇವಂತಿ ಬಳಿ ಮಾತನಾಡಿದೆ. ನಂತರ ಅವಳನ್ನು ಕರೆದುಕೊಂಡು ಬಂದೆ. ಕಾನೂನಾತ್ಮಕವಾಗಿ ದತ್ತು ತೆಗೆದುಕೊಳ್ಳಲು 3 ತಿಂಗಳು ಬೇಕು. ಅವಳ ಅಪ್ಪ ಅಮ್ಮನಿಗೆ ಒಪ್ಪಿಗೆ ಇದೆ. ನನಗೂ ಒಪ್ಪಿಗೆ ಇದೆ. ಕಾನೂನು ಕ್ರಮ ನಡೆಯುತ್ತಿದೆ’ ಎಂದು ಸೋನು ಹೇಳಿದ್ದರು.

Advertisement

Advertisement
Tags :
Advertisement