ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಬಿಎಸ್​ವೈ ಕಿಡಿ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧದ ತನಿಖೆಗೆ ನೀಡಿರುವ ಅನುಮತಿಯನ್ನು ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಕಾನೂನು ಬಾಹಿರವಾದದ್ದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ.
09:25 AM Nov 25, 2023 IST | Ramya Bolantoor

ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧದ ತನಿಖೆಗೆ ನೀಡಿರುವ ಅನುಮತಿಯನ್ನು ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಕಾನೂನು ಬಾಹಿರವಾದದ್ದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಡಿಕೆ.ಶಿವಕುಮಾರ್ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು.

“ರಾಜ್ಯ ಸರ್ಕಾರವು ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದಿತ್ತು. ರಾಜ್ಯ ಸರ್ಕಾರವು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿದೆ, ಕಾಯ್ದೆಯ ಪ್ರಕಾರ ರಾಜ್ಯದ ಅನುಮತಿಯಿಲ್ಲದೆ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ. ವಿಚಾರಣೆ ವೇಳೆ ಪ್ರಕರಣದ ತನಿಖೆಗೆ ಸಿಬಿಐಗೆ ಅನುಮತಿ ನೀಡುವ ಸರ್ಕಾರದ ನಿಲುವನ್ನು ಎಜಿ ಸಮರ್ಥಿಸಿಕೊಂಡಿದ್ದಾರೆ. ಸದ್ಯ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ರಿಟ್ ಅರ್ಜಿ ವಿಚಾರಣೆಗೆ ಬಾಕಿ ಇದೆ ಎಂದು ಹೇಳಿದರು.

Advertisement

"ತನಿಖೆ ಪ್ರಾರಂಭವಾದ ನಂತರ, ಯಾವುದೇ ಪ್ರಾಧಿಕಾರವು ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಆದರೆ ಈಗ ಅನುಮತಿ ಹಿಂಪಡೆಯುವುದನ್ನು ವಿರೋಧಿಸಿ ಕಾನೂನು ಹೋರಾಟಕ್ಕೆ ಸಿದ್ಧವಿದ್ದೇವೆ. ಅಗತ್ಯ ಕಂಡುಬಂದಲ್ಲಿ ನ್ಯಾಯಾಲಯಕ್ಕೆ ಹೆಚ್ಚಿನ ದಾಖಲೆ ನೀಡಲು ತಯಾರಿದ್ದೆವೆ.

ಎ.ಜಿ ಹುದ್ದೆಯಲ್ಲಿರುವವರು ಕಾನೂನಿಗೆ ತಕ್ಕ ನಡೆದುಕೊಳ್ಳಬೇಕು. ಆದರೆ ಈ ಪ್ರಕರಣದಲ್ಲಿ ಕಾನೂನು ಚೌಕಟ್ಟು ಮೀರಿದ್ದಾರೆ. ಸಿದ್ದರಾಮಯ್ಯ ಅವರು ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement
Tags :
CongressDK SHIVAKUMARGOVERNMENTKARNATAKALatestNewsNewsKannadaಬಿ.ಎಸ್. ಯಡಿಯೂರಪ್ಪ
Advertisement
Next Article