ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ಸಾಕಷ್ಟು ಅನ್ಯಾಯವಾಗುತ್ತಿದೆ: ಸಿಎಂ

‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ. ಎಂದು ಸಿಎಂ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದರು.
02:23 PM Feb 05, 2024 IST | Ashika S

ಬೆಂಗಳೂರು: ‘ಕೇಂದ್ರ ಸರ್ಕಾರವು ಕರ್ನಾಟಕದ ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಇದನ್ನು ಪ್ರಶ್ನಿಸಲು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ. ಎಂದು ಸಿಎಂ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದರು.

Advertisement

ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ಸಾಕಷ್ಟು ಅನ್ಯಾಯವಾಗುತ್ತಿದೆ. ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ಗೆ ಈ ಬಗ್ಗೆ ಮಾಹಿತಿಯೇ ಇಲ್ಲ, ಬಿಎಸ್​ ಯಡಿಯೂರಪ್ಪ ಅವರಿಗೂ ಬಾಯಿ ಬರಲ್ಲ ಎಂದರು.

ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಈ ಬಗ್ಗೆ ತುಟಿಬಿಚ್ಚಿಲ್ಲ. ಹೀಗಾಗಿ ದೇಶದ ಗಮನ ಸೆಳೆಯಲು ನಾಡಿದ್ದು ಪ್ರತಿಭಟನೆ ನಡೆಸುತ್ತಿದ್ದೇವೆ.

Advertisement

ಉತ್ತರದ ರಾಜ್ಯಗಳಿಗೆ ಅನುದಾನ ಕೊಡಿ, ಬೇಡವೆನ್ನುವುದಿಲ್ಲ. ಆದರೆ ದಕ್ಷಿಣದ ರಾಜ್ಯಗಳ ಕಡೆ ಗಮನಹರಿಸಿ. ರಾಜ್ಯದಿಂದ ಜೋಶಿ, ಶೋಭಾ, ಭಗವಂತ ಖೂಬಾ ಕೇಂದ್ರ ಮಂತ್ರಿಗಳಾಗಿದ್ದಾರೆ. ಒಂದು ದಿನವೂ ಅವರು ಬಾಯಿ‌ಬಿಡಲಿಲ್ಲ. ಸಂಸತ್‌ನಲ್ಲಿ ಇದರ ಬಗ್ಗೆ ಅವರು ಮಾತನಾಡಿದ್ದಾರಾ? ಇದೆಲ್ಲ ರಾಜ್ಯಕ್ಕೆ ಅನ್ಯಾಯ ಅಲ್ವೇ? ಜನ ಇವರನ್ನು ಆಶೀರ್ವಾದ ಮಾಡಿ ಕಳಿಹಿಸಿಲ್ಲವೇ? ಹಣಕಾಸು ಸಚಿವರು ನಮ್ಮ ರಾಜ್ಯದಿಂದಲೇ ಕೇಂದ್ರಕ್ಕೆ ಹೋಗಿದ್ದಾರೆ. ಅವರೇ ರಾಜ್ಯಕ್ಕೆ ಅನ್ಯಾಯ ಮಾಡಿದರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಫೆಬ್ರವರಿ 7ರಂದು ನಡೆಯುವ ಪ್ರತಿಭಟನೆಗೆ ಎಲ್ಲರೂ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಚಿವರು, ಶಾಸಕರಿಗೆ ಮನವಿ ಮಾಡಿದರು.

ಬಿಜೆಪಿ ನಾಯಕರನ್ನು ಉದ್ದೇಶಿಸಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಕೇಂದ್ರ ಸಚಿವ ಅಮಿತ್ ಶಾ ಅವರ ಬಳಿ ಮಾತನಾಡಿ, ಪ್ರಧಾನಿಯವರ ಬಳಿ ಮಾತನಾಡಿರಪ್ಪಾ, ಸಂಸತ್​​ನಲ್ಲಿ ಮಾತನಾಡಿ. ಇಲ್ಲಿ ಸುಳ್ಳು ಹೇಳಿಕೊಂಡು ಯಾಕೆ ಇರುತ್ತೀರಿ. ಅಲ್ಲಿಗೆ‌ಹೋಗಿ ಕೇಳಿ, ಮಾಡಿಸಿ ಎಂದು ಲೇವಡಿ ಮಾಡಿದರು.

ರಾಜ್ಯ ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು, 25 ಸಂಸದರು ರಾಜ್ಯಕ್ಕೆ ಸಿಗಬೇಕಾದ ಪಾಲಿನ ಬಗ್ಗೆ ಮಾತನಾಡುತ್ತಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸುರೆಂಬ ಭರವಸೆಯಿಂದ ಧರಣಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

Advertisement
Tags :
LatetsNewsNewsKannadaಅನ್ಯಾಯಕರ್ನಾಟಕಬಸವರಾಜ ಬೊಮ್ಮಾಯಿಬಿಜೆಪಿ ನಾಯಕಸಿಎಂ
Advertisement
Next Article