For the best experience, open
https://m.newskannada.com
on your mobile browser.
Advertisement

ಸಿಇಟಿ ಪರೀಕ್ಷಾ ದಿನಾಂಕ ಪ್ರಕಟ: ಆನ್‌ಲೈನ್‌‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ

 ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸಿಇಟಿ ಪರೀಕ್ಷೆಯು 2024ರ ಏಪ್ರಿಲ್​ 20 ಮತ್ತು 21ರಂದು ನಡೆಯಲಿದೆ.
08:01 PM Dec 22, 2023 IST | Ashitha S
ಸಿಇಟಿ ಪರೀಕ್ಷಾ ದಿನಾಂಕ ಪ್ರಕಟ  ಆನ್‌ಲೈನ್‌‌ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸಿಇಟಿ ಪರೀಕ್ಷೆಯು 2024ರ ಏಪ್ರಿಲ್​ 20 ಮತ್ತು 21ರಂದು ನಡೆಯಲಿದೆ.

Advertisement

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಏಪ್ರಿಲ್​ 20ರ ಬೆಳಗ್ಗೆ 10.30ರಿಂದ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ ಗಣಿತ, 21ರಂದು ಬೆಳಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ತಲಾ 60 ಅಂಕಗಳಿಗೆ ನಡೆಯಲಿದೆ.

ಹಾಗೆಯೇ, ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.19ರ ಶುಕ್ರವಾರದಂದು ಬೆಂಗಳೂರು, ಬೀದರ್‌, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

Advertisement

Advertisement
Tags :
Advertisement