For the best experience, open
https://m.newskannada.com
on your mobile browser.
Advertisement

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಮೂಲ ತಿಳಿಸಿವೆ.
05:50 PM May 20, 2024 IST | Ashitha S
ದ್ವಿತೀಯ ಪಿಯುಸಿ  2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಮೂಲ ತಿಳಿಸಿವೆ.

Advertisement

ಇಂದು ಎಂದರೇ ಸೋಮವಾರ 20 ರಂದು ಪ್ರಕಟಿಸಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವುದು ಸತ್ಯವಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ದೇಶಕ ಎಚ್‌.ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದಾರೆ.

ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ ಶೇ.50 ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರ್ಯಾಂಕ್‌ನ್ನು ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ ಇಂದು ಮೊದಲಿಂದಲೂ ಬಂದ ನಿಯಮ ಎಂದು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

Advertisement

ಅದರಲ್ಲೂ ಪ್ರಸಕ್ತ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು , ಅದರಲ್ಲಿ ಮೊದರ ಎರಡು ಪರೀಕ್ಷೆಗಳಲ್ಲಿ ಯಾವುದರಲ್ಲಿ ಹೆಚ್ಚು ಅಂಕ ಬಂದಿರತ್ತದೋ ಅದನ್ನು ಸಿಇಟಿ ರ್ಯಾಂಕ್‌ಗೆ ಪರಿಗಣಿಸಬೇಕಾಗುತ್ತದೆ ಹಾಗಾಗಿ ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶವನ್ನು ಪ್ರಕಟಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

Advertisement
Tags :
Advertisement