For the best experience, open
https://m.newskannada.com
on your mobile browser.
Advertisement

"ಜಮ್ಮು ಕಾಶ್ಮೀರ ನ್ಯಾಷನಲ್​ ಫ್ರಂಟ್"​ ಅನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ಹರಡುತ್ತಿರುವ ಕಾಣಕ್ಕಾಗಿ ಕೇಂದ್ರ ಸರ್ಕಾರವು ಯುಎಪಿಎ ಅಡಿಯಲ್ಲಿ 'ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್'​ ಅನ್ನು ನಿಷೇಧಿಸಿದೆ.
08:22 AM Mar 13, 2024 IST | Ashitha S
 ಜಮ್ಮು ಕಾಶ್ಮೀರ ನ್ಯಾಷನಲ್​ ಫ್ರಂಟ್ ​ ಅನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ದೆಹಲಿ: ಪ್ರತ್ಯೇಕತಾವಾದಿ ಚಟುವಟಿಕೆಗಳನ್ನು ಹರಡುತ್ತಿರುವ ಕಾಣಕ್ಕಾಗಿ ಕೇಂದ್ರ ಸರ್ಕಾರವು ಯುಎಪಿಎ ಅಡಿಯಲ್ಲಿ "ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್"​ ಅನ್ನು ನಿಷೇಧಿಸಿದೆ.

Advertisement

ಜೆಕೆಎನ್​ಎಫ್​ ಸದಸ್ಯರು ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ಆಗಾಗ್ಗೆ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದಾರೆ’ ಹೀಗಾಗಿ ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ಜನರಲ್ಲಿ ಅಸಮಾಧಾನದ ಬೀಜ ಬಿತ್ತುತ್ತಾ, ಭದ್ರತೆ ಹಾಗೂ ಸಾರ್ವಭೌಮತೆಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರವು ನ್ಯಾಷನಲ್​ ಫ್ರಂಟ್​ ಮೇಲೆ ಐದು ವರ್ಷಗಳ ನಿಷೇಧ ಹೇರಿದೆ. ಆದೇಶದಲ್ಲಿ, ಗೃಹ ಸಚಿವಾಲಯವು ನಯೀಮ್ ಅಹ್ಮದ್ ಖಾನ್ ನೇತೃತ್ವದ ಜೆಕೆಎನ್​ಎಫ್​ ಅನ್ನು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯಡಿ ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

Advertisement

ದೇಶದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಯೋತ್ಪಾದಕ ಶಕ್ತಿಗಳನ್ನು ಬೇರುಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಮಾಧ್ಯಮ ಫ್ಲ್ಯಾಟ್​ಫಾರ್ಮ್​ ಎಕ್ಸ್​ನಲ್ಲಿ ನಿಷೇಧದ ಬಗ್ಗೆ ಮಾಹಿತಿ ನೀಡಿದರು.

Advertisement
Tags :
Advertisement