ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭೆ ಸ್ಪರ್ಧೆಗೆ ಅವಕಾಶ ಸಿಕ್ಕಿದಲ್ಲಿ ವಿರೋಧವಿಲ್ಲ: ಚಕ್ರವರ್ತಿ ಸೂಲಿಬೆಲೆ

ಭಾರತವನ್ನು ಶ್ರೇಷ್ಠ ಭಾರತವನ್ನಾಗಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ನಮೋ ಭಾರತ್ ತಂಡದಿಂದ ವಿಶೇಷ ಕಾರ್ಯಕ್ರಮ ಇಂದು(ಮಾ.14) ನಡೆಯಿತು.
09:47 PM Mar 14, 2024 IST | Ashika S

ಪುತ್ತೂರು: ಭಾರತವನ್ನು ಶ್ರೇಷ್ಠ ಭಾರತವನ್ನಾಗಿಸುವ ನಿಟ್ಟಿನಲ್ಲಿ ಹುಟ್ಟಿಕೊಂಡ ನಮೋ ಭಾರತ್ ತಂಡದಿಂದ ವಿಶೇಷ ಕಾರ್ಯಕ್ರಮ ಇಂದು(ಮಾ.14) ನಡೆಯಿತು.

Advertisement

ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯಲಿರುವ ಜಿಲ್ಲೆಯ ಪ್ರಥಮ ಕಾರ್ಯಕ್ರಮದಲ್ಲಿ ನಮೋ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಿಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಸೂಲಿಬೆಲೆ ಪುತ್ತೂರು ಸೀಮೆಯ ಅಧಿಪತಿ ಶ್ರೀ ಮಹಾಲಿಂಗೇಶ್ವರನ ಸನ್ನಿಧಿಗೆ ತೆರಳಿ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರ ವದಂತಿಯಷ್ಟೇ. 2014, 2019 ರಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024ರಲ್ಲೂ ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂತಹ ಅವಕಾಶ ಬಂದರೆ ವಿರೋಧ ಇಲ್ಲ ಎಂದು ಹೇಳಿದರು.

Advertisement

Advertisement
Tags :
LatetsNewsNewsKannadaಚಕ್ರವರ್ತಿ ಸೂಲಿಬೆಲೆ
Advertisement
Next Article