ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಿಯಾದ್‌ನಲ್ಲಿ ಬಂಧಿಯಾಗಿದ್ದ ಚಂದ್ರಶೇಖರ್‌ ಕೊನೆಗೂ ಸ್ವದೇಶಕ್ಕೆ

ಮಂಗಳೂರು: ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧಮುಕ್ತನಾಗಿದ್ದು, ಸೋಮವಾರ ರಾತ್ರಿ (ನ.20) ಸ್ವದೇಶಕ್ಕೆ ಆಗಮಿಸಿದ್ದಾರೆ.
09:46 PM Nov 20, 2023 IST | Umesha HS

ಮಂಗಳೂರು: ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧಮುಕ್ತನಾಗಿದ್ದು, ಸೋಮವಾರ ರಾತ್ರಿ (ನ.20) ಸ್ವದೇಶಕ್ಕೆ ಆಗಮಿಸಿದ್ದಾರೆ.

Advertisement

ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಟ್ಟಿದ್ದು, ಅಲ್ಲಿಂದ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಅವರು ಭಾವುಕರಾದರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್‌ 2022ರಲ್ಲಿ ಕೆಲಸದಲ್ಲಿ ಪದೋನ್ನತಿ ಪಡೆದು ಸೌದಿ ಅರೇಬಿಯಾಕ್ಕೆ ಕಂಪನಿ ಕೆಲಸಕ್ಕೆ ತೆರಳಿದ್ದರು. ಅಲ್ಲಿಅಲ್ಪಾನರ್‌ ಸೆರಾಮಿಕ್ಸ್‌ ಎಂಬ ಕಂಪನಿಯಲ್ಲಿದ್ದರು. 2022ರ ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ರಿಯಾದ್‌ನ ಅಂಗಡಿಗೆ ಭೇಟಿ ನೀಡಿದ್ದರು. ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್‌) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ಬಳಿಕ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್‌ ಅವರನ್ನು ಬಂಧಿಸಿದ್ದರು.

Advertisement
Advertisement
Tags :
AIRPORTmangalorePOLICEಪೊಲೀಸರುಮಂಗಳೂರುಮುಂಬೈಸೌದಿ ಅರೇಬಿಯಾಸ್ವದೇಶಹ್ಯಾಕರ್​
Advertisement
Next Article