For the best experience, open
https://m.newskannada.com
on your mobile browser.
Advertisement

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ 50 ಮೀಟರ್​ ವ್ಯಾಪ್ತಿಯಲ್ಲಿ ಇನ್ಮುಂದೆ ಯಾರೂ ರೀಲ್ಸ್​ಗಳನ್ನು ಮಾಡುವಂತಿಲ್ಲ ಎನ್ನುವ ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ.
09:43 AM May 17, 2024 IST | Ashitha S
ಚಾರ್ ಧಾಮ್​ ಯಾತ್ರೆ  ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಉತ್ತರಾಖಂಡ: ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ 50 ಮೀಟರ್​ ವ್ಯಾಪ್ತಿಯಲ್ಲಿ ಇನ್ಮುಂದೆ ಯಾರೂ ರೀಲ್ಸ್​ಗಳನ್ನು ಮಾಡುವಂತಿಲ್ಲ ಎನ್ನುವ ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ.

Advertisement

ಕೇದಾರನಾಥ, ಬದರಿನಾಥ್, ಯಮುನೋತ್ರಿ ಮತ್ತು ಗಂಗೋತ್ರಿಯಲ್ಲಿ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ನಿರ್ಧರಿಸಿದೆ. ಹರಿದ್ವಾರ ಮತ್ತು ರಿಷಿಕೇಶದಲ್ಲಿ ಆಫ್‌ಲೈನ್ ನೋಂದಣಿ ಮೇ 19 (ಭಾನುವಾರ)ದವರೆಗೆ ಮುಚ್ಚಿರುತ್ತದೆ ಎಂದು ಮುಖ್ಯ ಕಾರ್ಯದರ್ಶಿ ರಾಧಾ ರತುರಿ ತಿಳಿಸಿದ್ದಾರೆ. ದೇವಾಲಯಗಳ 50 ಮೀಟರ್ ವ್ಯಾಪ್ತಿಯಲ್ಲಿ ವಿಡಿಯೋಗ್ರಫಿ ಮತ್ತು ಸಾಮಾಜಿಕ ಮಾಧ್ಯಮ ರೀಲ್‌ಗಳ ಮೇಕಿಂಗ್ ಮೇಲೆ ನಿಷೇಧ ಹೇರಲಾಗಿದೆ.

ಕೆಲವು ಯಾತ್ರಾರ್ಥಿಗಳಿಂದ ದೇವಾಲಯಗಳ ಆವರಣದಲ್ಲಿ ವೀಡಿಯೊಗ್ರಫಿ ಮಾಡಲಾಗುತ್ತಿದೆ ಮತ್ತು ರೀಲ್ಸ್​ಗಳನ್ನು ಮಾಡಲಾಗುತ್ತಿದೆ, ಇದರಿಂದಾಗಿ ಜನರು ಒಂದೇ ಸ್ಥಳದಲ್ಲಿ ಸೇರುತ್ತಾರೆ, ಇದರಿಂದ ಅನನುಕೂಲತೆ ಉಂಟಾಗುತ್ತದೆ ಎಂದು ರಾತುರಿ ಹೇಳಿದರು.

Advertisement

Advertisement
Tags :
Advertisement