ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.
10:47 AM May 09, 2024 IST | Ashitha S

ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆದಿದ್ದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದ್ದರೆ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.  ಹಾಗು  ಶೇ 73.4 ಮಂದಿ ತೇರ್ಗಡೆಗೊಂಡಿದ್ದಾರೆ. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಜೊತೆಗೆ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.

Advertisement

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

Advertisement

ಇನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಲಾದ ಆನ್‌ಲೈನ್ ಮಾರ್ಕ್ ಶೀಟ್ ತಾತ್ಕಾಲಿಕವಾಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಶಾಲೆಗಳ ಅಧಿಕೃತ ಸೂಚನೆಯ ಪ್ರಕಾರ ಫಲಿತಾಂಶಗಳನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ತಮ್ಮ ಶಾಲೆಗಳಿಂದ SSLC ಮಾರ್ಕ್‌ಶೀಟ್ ಪಡೆಯಬೇಕು.

 

 

Advertisement
Tags :
10TH RESULTSBreakingNewsGOVERNMENTindiaKARNATAKANewsKarnatakaSSLCಬೆಂಗಳೂರು
Advertisement
Next Article