For the best experience, open
https://m.newskannada.com
on your mobile browser.
Advertisement

ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡದ ಹಿರಿಯ ನಟ, ದ್ವಾರಕೀಶ್ ನಿನ್ನೆ ಹೃದಯಾಘಾತದಿಂದ ವಿಧಿವಶರಾಗಿದ್ದು, ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.
12:23 PM Apr 17, 2024 IST | Ashika S
ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನ್ನಡದ ಹಿರಿಯ ನಟ, ದ್ವಾರಕೀಶ್ ನಿನ್ನೆ ಹೃದಯಾಘಾತದಿಂದ ವಿಧಿವಶರಾಗಿದ್ದು, ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು.

Advertisement

ಅಂತಿಮ ದರ್ಶನ ಪಡೆದು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಮ್ಮೆ ನಾನು ಮತ್ತು ಅವರು ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಹೋಗಿದ್ವಿ. ಕನ್ನಡ ಸೇವೆಯನ್ನು ಮಾಡಿದ ಅಪ್ರತಿಮ ಸಾಧಕ. ದ್ವಾರಕೀಶ್ ಅವರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಅವರ ಸಾವಿನಿಂದ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.

ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆಗಳನ್ನು ಕೊಟ್ಟಿದ್ದರು. ಕನ್ನಡ ಚಿತ್ರರಂಗ ಅತ್ಯದ್ಭುತ ನಟರಾಗಿದ್ದರು. ನಟರಾಗಿ, ನಿರ್ಮಾಪಕನಾಗಿ, ಹಾಸ್ಯ ನಟನಾಗಿ, ನಿರ್ದೇಶಕರಾಗಿ ಜನರ ಮನ ಗೆದ್ದಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

Advertisement

ಮಧ್ಯಾಹ್ನದ ವೇಳೆಗೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತಿಮ ಕಾರ್ಯಗಳು ನಡೆಯಲಿವೆ.

Advertisement
Tags :
Advertisement