ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶಾಕಿಂಗ್‌ ಸುದ್ದಿ: ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಅತ್ಯಧಿಕ !

ರಾಜ್ಯದಲ್ಲಿ 18 ವರ್ಷ ತುಂಬುವ ಒಳಗೆ ಬಾಲಕಿಯರು ಗರ್ಭಿಣಿಯಾಗಿರುವ ಪ್ರಕರಣಗಳು ರಾಜ್ಯದಲ್ಲಿ ಏರಿಕೆಯಾಗಿದೆ.
05:23 PM Jan 12, 2024 IST | Ramya Bolantoor

ವಿಜಯಪುರ: ರಾಜ್ಯದಲ್ಲಿ 18 ವರ್ಷ ತುಂಬುವ ಒಳಗೆ ಬಾಲಕಿಯರು ಗರ್ಭಿಣಿಯಾಗಿರುವ ಪ್ರಕರಣಗಳು ರಾಜ್ಯದಲ್ಲಿ ಏರಿಕೆಯಾಗಿದೆ. 2023ರ ಜನವರಿಯಿಂದ ನವೆಂಬರ್‌ ವರೆಗೆ ರಾಜ್ಯದಲ್ಲಿ ಒಟ್ಟು 28,657 ಬಾಲಕಿಯರು ಗರ್ಭಿಣಿಯಾಗಿದ್ದಾರೆ.

Advertisement

ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್‌) ಪೋರ್ಟಲ್‌ ಪ್ರಕಾರ, 2023ರ ಜನವರಿಯಿಂದ ನವೆಂಬರ್‌ ವರೆಗಿನ 11 ತಿಂಗಳಲ್ಲಿ ರಾಜ್ಯದ 28,657 ಬಾಲಕಿಯರು ಗರ್ಭಿಣಿಯರು ಆಗಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಅಂದರೆ, 2,815 ಬಾಲಗರ್ಭಿಣಿಯರು ಬೆಂಗಳೂರಿನಲ್ಲಿದ್ದರೆ, ಬೆಳಗಾವಿ ಜಿಲ್ಲೆಯಲ್ಲಿ 2,254 ಮಂದಿ ಗರ್ಭಿಣಿಯರು ಇದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 2,004 ಬಾಲಕಿಯರು ಗರ್ಭಿಣಿಯರಾಗಿದ್ದರೆ, ಅತೀ ಕಡಿಮೆ ಅಂದರೆ, 56 ಪ್ರಕರಣಗಳು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿವೆ.

Advertisement

ಶಾರೀರಿಕ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಆಗದೇ ವಿವಾಹವಾಗುವ ಬಾಲಕಿಯರಿಗೆ ಹಲವು ಸ್ವರೂಪಗಳಲ್ಲಿ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಗರ್ಭಿಣಿಯರಾದರೆ ರಕ್ತಹೀನತೆ ಮತ್ತು ಪೌಷ್ಟಿಕಾಂಶದ ಕೊರತೆ ತಲೆದೋರುತ್ತದೆ. ತಾಯಿ ಮತ್ತು ಮಗು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ.

Advertisement
Tags :
LatestNewsNewsKannadaಬೆಂಗಳೂರು
Advertisement
Next Article