ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಎಂಟು ಮಕ್ಕಳು ಅಸ್ವಸ್ಥ

ಹೊಸಕೋಟೆ ತಾಲೂಕಿನ ನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ (ಜ.11) ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಜನ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
09:44 AM Jan 12, 2024 IST | Ashitha S

ದೇವನಹಳ್ಳಿ:  ಹೊಸಕೋಟೆ ತಾಲೂಕಿನ ನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ (ಜ.11) ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಜನ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

Advertisement

ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ, ವಸತಿ ನಿಲಯಕ್ಕೆ ತೆರಳಿದ್ದಾರೆ. ಅಲ್ಲಿ ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ತಕ್ಷಣ ವಸತಿ ನಿಲಯದ ವಾರ್ಡ್​ನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಪ್ರೌಡಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯಿಂದ ಈ ರೀತಿಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಳೆದೆರಡು ದಿನಗಳಿಂದ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸುತ್ತಿರುವ ಆರೋಪ ಕೇಳಿಬಂದಿದೆ.

ಈ ಪ್ರಕರಣದ ಕುರಿತು ಇದೀಗ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Advertisement

Advertisement
Tags :
Bengaluru RuralGOVERNMENT SCHOOLhoskoteಬಿಸಿಯೂಟಮಕ್ಕಳು ಅಸ್ವಸ್ಥ
Advertisement
Next Article