ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರಕ್ಕೆ ನಟ ಚಿರಂಜೀವಿ ಎಂಟ್ರಿ

ದರ್ಶನ್ ನಟನೆಯ ಕಾಟೇರ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಇದೇ ಡಿಸೆಂಬರ್ 29ರಂದು ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬೆನ್ನಲ್ಲೇ ದರ್ಶನ್ ಕುರಿತಾದ ಮತ್ತೊಂದು ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
04:30 PM Dec 27, 2023 IST | Ashitha S

ಬೆಂಗಳೂರು: ದರ್ಶನ್ ನಟನೆಯ ಕಾಟೇರ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ಇದೇ ಡಿಸೆಂಬರ್ 29ರಂದು ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಈ ಬೆನ್ನಲ್ಲೇ ದರ್ಶನ್ ಕುರಿತಾದ ಮತ್ತೊಂದು ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಇದು ಸುಳ್ಳೋ ನಿಜವೋ ಗೊತ್ತಿಲ್ಲ. ಆದರೆ, ನಾನಾ ಕಾರಣಗಳಿಂದಾಗಿ ಸುದ್ದಿಗೆ ಮಹತ್ವ ನೀಡಲಾಗುತ್ತಿದೆ.

Advertisement

ಕಾಟೇರ ಸಿನಿಮಾ ರಿಲೀಸ್ ನಂತರ ದರ್ಶನ್ ಈಗಾಗಲೇ ಒಪ್ಪಿಕೊಂಡಿರುವ ಮಿಲನ ಪ್ರಕಾಶ್ ನಿರ್ದೇಶನದ ಚಿತ್ರದಲ್ಲಿ ನಟಿಸಬೇಕಿದೆ. ಇನ್ನೂ ಆ ಸಿನಿಮಾದ ಶೂಟಿಂಗ್ ಕೂಡ ಶುರುವಾಗಿಲ್ಲ. ಆದರೂ, ಮತ್ತೊಂದು ಸಿನಿಮಾದ ಸುದ್ದಿ ಜೋರಾಗಿಯೇ ಕೇಳಿ ಬರುತ್ತಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ದರ್ಶನ್ ಸಿನಿಮಾವೊಂದನ್ನು ಮಾಡಲಿದ್ದು, ಆ ಸಿನಿಮಾದಲ್ಲಿ ತೆಲುಗಿನ ಸೂಪರ್ ಸ್ಟಾರ್ ಚಿರಂಜೀವಿ ಪಾತ್ರ ಮಾಡಲಿದ್ದಾರಂತೆ.

ಈ ಹಿಂದೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಸಿಪಾಯಿ ಸಿನಿಮಾದಲ್ಲಿ ಚಿರಂಜೀವಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಸಾರ್ವಕಾಲಿಕ ಹಿಟ್ ಹಾಡುಗಳಲ್ಲಿ ಒಂದಾದ, ಸ್ನೇಹಕ್ಕೆ ಸ್ನೇಹ, ಪ್ರೀತಿಗೆ ಪ್ರೀತಿ ಎಂಬ ಶೀರ್ಷಿಕೆಯ ಹಾಡಿನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಪ್ರೇಮ್ ಮತ್ತು ದರ್ಶನ್ ನಡುವಿನ ಸಹಯೋಗವು ಈಗಾಗಲೇ ಸಿನಿ ಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದು, ಈ ಇಬ್ಬರ ಕಾಂಬಿನೇಷನ್ನಲ್ಲಿ ಕರಿಯಾ ಚಿತ್ರ ಹಿಟ್ ಆಗಿತ್ತು.

Advertisement

Advertisement
Tags :
BreakingNewsindiaLatestNewsNewsKannadaSANDALWOODಚಿರಂಜೀವಿಬೆಂಗಳೂರು
Advertisement
Next Article