For the best experience, open
https://m.newskannada.com
on your mobile browser.
Advertisement

7ನೇ ವೇತನ ಆಯೋಗದ ಬಗ್ಗೆ ಸಿಎಂ ಮಹತ್ವದ ಘೋಷಣೆ !

ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿ ಹಾಗೂ ಅದರಂತೆ ವೇತನ ಪರಿಷ್ಕರಣೆ ಬಗ್ಗೆ ಎದುರು ನೋಡುತ್ತಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ರಾಜ್ಯ ಬಜೆಟ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
12:57 PM Feb 16, 2024 IST | Ashitha S
7ನೇ ವೇತನ ಆಯೋಗದ ಬಗ್ಗೆ ಸಿಎಂ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿ ಹಾಗೂ ಅದರಂತೆ ವೇತನ ಪರಿಷ್ಕರಣೆ ಬಗ್ಗೆ ಎದುರು ನೋಡುತ್ತಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ರಾಜ್ಯ ಬಜೆಟ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

Advertisement

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು.

ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ. ಈವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಒಟ್ಟಾರೆ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಅಂತ ತಿಳಿಸಿದ್ದಾರೆ.

Advertisement

Advertisement
Tags :
Advertisement