For the best experience, open
https://m.newskannada.com
on your mobile browser.
Advertisement

ದ್ವಾರಕೀಶ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಸಿಎಂ, ಡಿಸಿಎಂ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
02:20 PM Apr 16, 2024 IST | Chaitra Kulal
ದ್ವಾರಕೀಶ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಸಿಎಂ  ಡಿಸಿಎಂ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ, ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಕನ್ನಡ ಚಿತ್ರರಂಗದಲದಲ್ಲಿ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್‌ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ.

ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ನುಡಿದರು.

Advertisement

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಹಾಗೂ ಹಿರಿಯ ಕಲಾವಿದ ದ್ವಾರಕೀಶ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಕಲಾವಿದನಾಗಿ ಅಗಾಧವಾದ ಸೇವೆ ಸಲ್ಲಿಸಿರುವ ದ್ವಾರಕೀಶ್ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ.

ಕನ್ನಡ ಚಿತ್ರರಂಗದಲ್ಲಿ ಅನೇಕ ಹೊಸ ಮೈಲುಗಲ್ಲುಗಳನ್ನು ಸಾಧಿಸಿ, ಚಿತ್ರರಂಗಕ್ಕೆ ದೊಡ್ಡ ಅಡಿಪಾಯ ಹಾಕಿಕೊಟ್ಟವರಲ್ಲಿ ದ್ವಾರಕೀಶ್ ಕೂಡ ಒಬ್ಬರು. ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್, ಡಾ.ಅಂಬರೀಶ್, ಶಂಕರ್ ನಾಗ್ ಸೇರಿದಂತೆ ಕನ್ನಡ ಚಿತ್ರರಂಗದ ಘಟಾನುಘಟಿ ನಟರ ಜೊತೆ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಬೆಳೆಸಿದ್ದಾರೆ.

ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್  ಸಂದೇಶದಲ್ಲಿ ತಿಳಿಸಿದ್ದಾರೆ.

Advertisement
Tags :
Advertisement