ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತ್‌ ನ್ಯಾಯ್‌ ಜೋಡೋ ಯಾತ್ರೆ: ಮಣಿಪುರಕ್ಕೆ ತೆರಳಿದ ಸಿಎಂ, ಡಿಸಿಎಂ

ರಾಹುಲ್‌ ಗಾಂಧಿ ನೇತ್ರತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮಣಿಪುರದ ಇಂಪಾಲ್ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಆಗಮಿಸಿದರು. ಇವರಿಗೆ ಪಕ್ಷದ ಮುಖಂಡರು ಸ್ವಾಗತ ಕೋರಿದರು.
03:49 PM Jan 14, 2024 IST | Ashitha S

ಬೆಂಗಳೂರು: ರಾಹುಲ್‌ ಗಾಂಧಿ ನೇತ್ರತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮಣಿಪುರದ ಇಂಪಾಲ್ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಆಗಮಿಸಿದರು. ಇವರಿಗೆ ಪಕ್ಷದ ಮುಖಂಡರು ಸ್ವಾಗತ ಕೋರಿದರು.

Advertisement

ಸಿಎಂ ಸಿದ್ದರಾಮಯ್ಯ ಜೊತೆಯಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸಾಥ್‌ ನೀಡಿದರು.

ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಲಿದ್ದಾರೆ. ಕಳೆದ ವರ್ಷ ನಡೆದ ಭಾರತ್‌ ಜೋಡೋ ಯಾತ್ರೆಯ ಭರ್ಜರಿ ಯಶಸ್ಸಿನ ಸಂತಸದಲ್ಲಿರುವ ಕಾಂಗ್ರೆಸ್‌ ಪಕ್ಷ ಇದೀಗ ಮತ್ತೊಂದು ಸುತ್ತಿನ ಯಾತ್ರೆಯನ್ನು ನಡೆಸಲು ಸಜ್ಜಾಗಿದ್ದು, ಇಂದಿನಿಂದ 6713 ಕಿಲೋ ಮೀಟರ್‌ ನಡಿಗೆಯ ಮೂಲಕ ಭಾರತ್‌ ಜೋಡೋ ನ್ಯಾಯ್‌ ಯಾತ್ರೆ ನಡೆಯಲಿದೆ.

Advertisement

Advertisement
Tags :
BJPCongressGOVERNMENTindiaಚುನಾವಣೆಸಿದ್ದರಾಮಯ್ಯ
Advertisement
Next Article