ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಯೋಜನೆಗೆ ಸಿಎಂ ಸಿದ್ದು ಚಾಲನೆ

ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ವೇದಿಕೆ ಮೇಲೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಕುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
01:26 PM Feb 22, 2024 IST | Ashitha S

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ವೇದಿಕೆ ಮೇಲೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಕುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

Advertisement

ಸಿಎಂ ಸಿದ್ದರಾಮಯ್ಯನವರು ವೇದಿಕೆ ಮೇಲೆ ಮಕ್ಕಳೊಂದಿಗೆ ನಗು ನಗುತ ಚರ್ಚೆ ಮಾಡುತ್ತಿದ್ದದ್ದು ಕಂಡು ಬಂತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ನಿತ್ಯ 60 ಲಕ್ಷದಂತೆ ವಾರಕ್ಕೆ 1.80 ಕೋಟಿ ಮಕ್ಕಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ಸರ್ಕಾರ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದೆ. ಕ್ಷೀರಭಾಗ್ಯದ ಹಾಲಿನ ಜೊತೆ ಬೆಳಗ್ಗೆ ರಾಗಿಗಂಜಿ ಕೊಡುವ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ನೀಡಲಾಗುತ್ತೆ.

Advertisement

Advertisement
Tags :
BJPGOVERNMENTindiaKARNATAKALatestNewsNewsKannadaSCHOOLSTUDENTರಾಗಿ ಮಾಲ್ಟ್
Advertisement
Next Article