For the best experience, open
https://m.newskannada.com
on your mobile browser.
Advertisement

ಕೆ.ಎಸ್‌.ಆರ್‌.ಟಿ.ಸಿಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್​ಗಳಿಗೆ ಸಿಎಂ ಚಾಲನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.
11:46 AM Feb 05, 2024 IST | Ashitha S
ಕೆ ಎಸ್‌ ಆರ್‌ ಟಿ ಸಿಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್​ಗಳಿಗೆ ಸಿಎಂ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

Advertisement

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ನಡೆದ ಕಾರ್ಯಕ್ರಮದಲ್ಲಿ ಮೊದಲ ಹಂತದಲ್ಲಿ 100 ಹೊಸ ಕ್ಲಾಸಿಕ್ ಬಸ್​ಗಳಿಗೆ ಹಸಿರು ನಿಶಾನೆ ದೊರೆತಿದ್ದು, ಮುಂದಿನ ದಿನಗಳಲ್ಲಿ ಒಂದು ಸಾವಿರ ಹೊಸ ಬಸ್​ಗಳನ್ನು ಖರೀದಿಸುವ ಗುರಿ ಸಂಸ್ಥೆ ಹೊಂದಿದೆ.

ಅಶ್ವಮೇಧ ಕ್ಲಾಸಿಕ್ ಬಸ್​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮೆರಾ, ಮೊಬೈಲ್ ಚಾರ್ಜಿಂಗ್ ಪಾಯಿಂಟ್, 52 ಬಜೆಟ್ ಆಸನ, ಬಸ್ ಒಳಗೆ ಮತ್ತು ಹೊರಗೆ ಎಲ್​ಇಡಿ ಮಾರ್ಗ ಫಲಕ ಅಳವಡಿಸಲಾಗಿದೆ. ಈ ಬಸ್​ಗಳು ರಾಜಧಾನಿಯಿಂದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಸಂಚರಿಸಲಿವೆ. ಇನ್ನು ಈ ಅಶ್ವಮೇಧ ಕ್ಲಾಸಿಕ್ ಬಸ್​ಗಳಲ್ಲೂ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

Advertisement

ಕೆಎಸ್​ಆರ್​ಟಿಸಿಗೆ 1000 ಹೊಸ ಬಸ್ ಈ ವರ್ಷ ಸೇರ್ಪಡೆಯಾಗುತ್ತವೆ. ಇಂದು 100 ಬಸ್​ಗಳಿಗೆ ಚಾಲನೆ ನೀಡಿದ್ದೇವೆ. ನಾಲ್ಕು ವರ್ಷಗಳಿಂದ ಹೊಸ ಬಸ್ ಸೇರ್ಪಡೆ ಮಾಡಿರಲಿಲ್ಲ. ಕೊರೊನಾ ವೇಳೆ 3800 ಬಸ್ ನಿಲ್ಲಿಸಲಾಗಿತ್ತು. ಸಾರ್ವಜನಿಕರಿಗೆ ಬಹಳ ತೊಂದರೆ ಆಗಿತ್ತು. ನಾವು ಅಧಿಕಾರಕ್ಕೆ ಬಂದ ಮೇಲೆ 5800 ಬಸ್​ಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ರಾಜ್ಯದ ಸುರಕ್ಷಿತ ಪ್ರಯಾಣಕ್ಕೆ ಬೇಕಾಗದ ಎಲ್ಲಾ ಸೌಲಭ್ಯ ಮಾಡಿಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

https://twitter.com/CMofKarnataka/status/1754385247385661466/photo/1

Advertisement
Tags :
Advertisement