ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್​ ಕುಮಾರ್ ರಾಜೀನಾಮೆ

ಒಂದಷ್ಟು ದಿನಗಳಿಂದ ಸುದ್ದಿಯಲ್ಲಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಅವರು ಕೊನೆಗೂ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
11:47 AM Jan 28, 2024 IST | Ashitha S

ಬಿಹಾರ: ಒಂದಷ್ಟು ದಿನಗಳಿಂದ ಸುದ್ದಿಯಲ್ಲಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಅವರು ಕೊನೆಗೂ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Advertisement

ಕಳೆದ ಮೂರು ದಿನಗಳಿಂದ ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಗೊಂದಲದ ನಡುವೆ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾಮೈತ್ರಿಕೂಟ ತೊರೆದು ಇದೀಗ ಎನ್ ಡಿಎ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಜೆಯೇ ನಿತೀಶ್ ಕುಮಾರ್ 9ನೇ ಬಾರಿಗೆ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಯು ಶಾಸಕಾಂಗ ಪಕ್ಷದ ಸಭೆಯ ನಂತರ ಅವರು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ಇದರೊಂದಿಗೆ ಬಿಹಾರದಲ್ಲಿ ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿ ಮುರಿದು ಬಿದ್ದಿದೆ.

Advertisement

 

 

Advertisement
Tags :
BJPGOVERNMENTindiaLatestNewsNewsKannadaಕಾಂಗ್ರೆಸ್ನಿತೀಶ್ ಕುಮಾರ್
Advertisement
Next Article