ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕನ್ನಡ ರಾಜ್ಯೋತ್ಸವ: ಸರ್ಕಾರಿ ಶಾಲೆಗಳಿಗೆ ಬಂಪರ್​ ಗಿಫ್ಟ್ ಘೋಷಿಸಿದ ಸಿಎಂ ಸಿದ್ದು

ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ, ಸಡಗರ ಕಳೆಗಟ್ಟಿದ್ದು ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಸಿಎಂ ಸಿದ್ದರಾಮಯ್ಯ ಅವರು ನೆರವೇರಿಸಿದರು. ಬಳಿಕ ನಾಡಿನ ಎಲ್ಲ ಕನ್ನಡಿಗರಿಗೆ ಶುಭಾಶಯಗಳನ್ನು ತಿಳಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. 'ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು' ನೀಡುವುದಾಗಿ ಭರವಸೆ ನೀಡಿದರು.
11:11 AM Nov 01, 2023 IST | Ashitha S

ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ, ಸಡಗರ ಕಳೆಗಟ್ಟಿದ್ದು ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಸಿಎಂ ಸಿದ್ದರಾಮಯ್ಯ ಅವರು ನೆರವೇರಿಸಿದರು. ಬಳಿಕ ನಾಡಿನ ಎಲ್ಲ ಕನ್ನಡಿಗರಿಗೆ ಶುಭಾಶಯಗಳನ್ನು ತಿಳಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. "ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರು" ನೀಡುವುದಾಗಿ ಭರವಸೆ ನೀಡಿದರು.

Advertisement

ಇತ್ತೀಚಿನ ದಿನಗಳಲ್ಲಿ ಪೋಷಕರು ಹೆಚ್ಚಾಗಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ನಮ್ಮ ಪ್ರಯತ್ನಗಳಿಗೆ ನ್ಯಾಯಾಲಯ ಸಹ ಸಹಕಾರ ನೀಡುತ್ತಿಲ್ಲ. ನ್ಯಾಯಾಲಯ ಕೂಡಾ ಪೋಷಕರು ಇಚ್ಛಿಸುವ ಮಾಧ್ಯಮದಲ್ಲಿಯೇ ಮಕ್ಕಳು ಓದಬೇಕು ಅಂತ ಹೇಳಿದೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜಕಾರಣಿಗಳು, ಅಧಿಕಾರಿಗಳು‌ ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸಬೇಕು.ಈ ಕುರಿತು ಪ್ರಧಾನಿಗಳಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ನಾಡಿನ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು. ದುರದೃಷ್ಟವಶಾತ್ ರಾಜ್ಯದಲ್ಲಿ ಅನೇಕ ಜಾತಿ, ಧರ್ಮ ಇದೆ. ಇದರಿಂದ ಗುಣಮಟ್ಟದ ಶಿಕ್ಷಣ ನೀಡಲು‌ ಸಾಧ್ಯವಾಗುತ್ತಿಲ್ಲ. ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು, ಶಿಕ್ಷಣ ಇಲಾಖೆ ಕೆಲಸ ಮಾಡಬೇಕಿದೆ. ಕನಿಷ್ಠ ಎಸ್​ಎಸ್​ಎಲ್‌ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ಸರ್ಕಾರಿ ಶಾಲೆಗಳಲ್ಲಿ ಉಚಿತ ವಿದ್ಯುತ್, ಕುಡಿಯುವ ನೀರು ಕೊಡುವಂತೆ ಒತ್ತಾಯ ಮಾಡಿದ್ದಾರೆ. ಎಲ್ಲ ಸರ್ಕಾರಿ ಶಾಲೆಗಳಲ್ಲೂ ಇಂದಿನಿಂದ ಉಚಿತವಾಗಿ ವಿದ್ಯುತ್ , ಕುಡಿಯುವ ನೀರು ನೀಡುತ್ತೇವೆ ಎಂದರು.

Advertisement

ಇನ್ನು ಸಿದ್ದರಾಮಯ್ಯ ಅವರು ಧ್ವಜಾರೋಹಣದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ರಿಜ್ವಾನ್ ಅರ್ಷದ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.

Advertisement
Tags :
BreakingNewsGOVERNMENTindiaLatestNewsNewsKannadaಕನ್ನಡ ರಾಜ್ಯೋತ್ಸವಬೆಂಗಳೂರುಸಿದ್ದರಾಮಯ್ಯ
Advertisement
Next Article