ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದ ರೈತರಿಗೆ ಬಂಪರ್‌ ಕೊಡುಗೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ತೀವ್ರ ಬರದ ಪರಿಸ್ಥಿತಿಯಿದೆ. ಮಳೆಕೊರತೆಯಿಂದ ಕುಡಿಯಲು ನೀರಿಲ್ಲದ ಸ್ಥಿತಿ ಎದುರಾಗಿದೆ. ಆದರೆ ರೈತರ ಕಲ್ಯಾಣಕ್ಕಾಗಿ ರಾಷ್ಟ್ರೀಯ ರೈತರ ದಿನದಂದು ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದು, ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.
11:49 AM Dec 24, 2023 IST | Ashika S

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದ ಪರಿಸ್ಥಿತಿಯಿದೆ. ಮಳೆಕೊರತೆಯಿಂದ ಕುಡಿಯಲು ನೀರಿಲ್ಲದ ಸ್ಥಿತಿ ಎದುರಾಗಿದೆ. ಆದರೆ ರೈತರ ಕಲ್ಯಾಣಕ್ಕಾಗಿ ರಾಷ್ಟ್ರೀಯ ರೈತರ ದಿನದಂದು ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದು, ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.

Advertisement

ಕರ್ನಾಟಕದ 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಮರುಜಾರಿ ಮಳೆ ಕೊರತೆಯಾದರೂ ಬೆಳೆಗಳಿಗೆ ನೀರಿನ ಅಭಾವ ಎದುರಾಗಬಾರದು. ಈ ನಿಟ್ಟಿನಲ್ಲಿ 100 ಕೋಟಿ ವೆಚ್ಚದಲ್ಲಿ ಕೃಷಿಭಾಗ್ಯ ಯೋಜನೆ ಮರುಜಾರಿಗೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ ರೂ. 2,000 ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ.

Advertisement

ಒಂದೂವರೆ ದಶಕಕ್ಕಿಂತ ಹೆಚ್ಚು ಕಾಲ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಯನ್ನು ಸಕ್ರಮಗೊಳಿಸಿ, ಭೂಒಡೆತನದ ಹಕ್ಕನ್ನು ರೈತರಿಗೆ ನೀಡಲಾಗುವುದು. ಪ್ರತಿಯೊಬ್ಬ ರೈತನು ಸ್ವಂತ ಭೂಮಿಯಲ್ಲಿ ಶ್ರಮದ ಮೂಲಕ ನೆಮ್ಮದಿಯ ಬದುಕು ಕಟ್ಟಿಕೊಳ್ಳಲಿ ಎಂಬುದು ನಮ್ಮ ಆಶಯವಾಗಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದಿದ್ದಾರೆ.

Advertisement
Tags :
LatetsNewsNewsKannadaಕೊರತೆಪರಿಸ್ಥಿತಿಬರಮಳೆರಾಜ್ಯಸಿಹಿಸುದ್ದಿ
Advertisement
Next Article