For the best experience, open
https://m.newskannada.com
on your mobile browser.
Advertisement

ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವೇ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್‌ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದಾರೆ.
10:58 AM Apr 11, 2024 IST | Ashika S
ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ (ಚಂದ್ರ ದರ್ಶನ) ಕಾಣಿಸಿಕೊಂಡಿದ್ದು, ಮರುದಿನವೇ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್‌ ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಬಾಂಧವರಿಗೆ ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಶುಭ ಕೋರಿದ್ದಾರೆ.

Advertisement

ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನ‌ಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು  ಶುಭಕೋರಿದ್ದಾರೆ.

ರಂಜಾನ್ ಹಿನ್ನೆಲೆ ಬೆಂಗಳೂರಿನ ಚಾಮರಾಚಪೇಟೆಯಲ್ಲಿರೋ ಈದ್ಗಾ ಮೈದಾನದಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಮುಸ್ಲಿಂ ಬಾಂಧವರು ನಮಾಜ್‌ ಮಾಡುತ್ತಿದ್ದಾರೆ. ಅಲ್ಲದೇ ಸಿಎಂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುತ್ತಮುತ್ತ ಬಿಗಿ ಪೊಲೀಸ್‌ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ.

Advertisement

Advertisement
Tags :
Advertisement