ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನವೆಂಬರ್ 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ

ಲೋಕಸಭೆ ಚುನಾವಣೆಗೂ ಮುನ್ನ ಮತ್ತೊಮ್ಮೆ ಜನರನ್ನು ತಲುಪಲು ಮುಖ್ಯಮಂತ್ರಿ  ಸಿದ್ದರಾಮಯ್ಯ ಮುಂದಾಗಿದ್ದಾರೆ.
06:41 PM Nov 25, 2023 IST | Ashika S

ಬೆಂಗಳೂರು:  ಲೋಕಸಭೆ ಚುನಾವಣೆಗೂ ಮುನ್ನ ಮತ್ತೊಮ್ಮೆ ಜನರನ್ನು ತಲುಪಲು ಮುಖ್ಯಮಂತ್ರಿ  ಸಿದ್ದರಾಮಯ್ಯ ಮುಂದಾಗಿದ್ದಾರೆ.

Advertisement

ನವೆಂಬರ್ 27ರಂದು ಸೋಮವಾರ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಒಂದು ದಿನದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಈ ವಿಚಾರವಾಗಿ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಮಾಹಿತಿ ನೀಡಿದೆ.

Advertisement

ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಎಕ್ಸ್​​ ಸಂದೇಶದಲ್ಲಿ ಸಚಿವಾಲಯ ಉಲ್ಲೇಖಿಸಿದೆ.

ಜನತಾ ದರ್ಶನದ ವೇಳೆಯೇ ಸಿಎಂ ಜಿಲ್ಲಾ, ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆ ನಿವಾರಣೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ಹೀಗಾಗಿ ನವೆಂಬರ್ 27ರಂದು ಎಲ್ಲ ಅಧಿಕಾರಿಗಳು ಕಚೇರಿಗಳಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಪತ್ರದಲ್ಲಿ ಸೂಚನೆ ನೀಡಲಾಗಿದೆ.

Advertisement
Tags :
LatetsNewsNewsKannadaಚುನಾವಣೆಜನತಾ ದರ್ಶನಮುಖ್ಯಮಂತ್ರಿಲೋಕಸಭೆಸಿದ್ದರಾಮಯ್ಯ
Advertisement
Next Article