For the best experience, open
https://m.newskannada.com
on your mobile browser.
Advertisement

ಕೆಫೆ ಸ್ಫೋಟ ಆರೋಪಿಗಳನ್ನು ಬಂಧಿಸಿದ ತನಿಖಾ ಸಂಸ್ಥೆಗೆ ಧನ್ಯವಾದ ಸಲ್ಲಿಸಿದ ಸಿಎಂ

ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳನ್ನು ಸುದೀರ್ಘ ಕಾರ್ಯಾಚರಣೆಯ ನಂತರ ಬಂಧಿಸುವಲ್ಲಿ ಯಶಸ್ವಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗು ರಾಜ್ಯ ಪೋಲಿಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಧನ್ಯವಾದ ತಿಳಿಸಿದ್ದಾರೆ.
06:24 PM Apr 13, 2024 IST | Maithri S
ಕೆಫೆ ಸ್ಫೋಟ ಆರೋಪಿಗಳನ್ನು ಬಂಧಿಸಿದ ತನಿಖಾ ಸಂಸ್ಥೆಗೆ ಧನ್ಯವಾದ ಸಲ್ಲಿಸಿದ ಸಿಎಂ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳನ್ನು ಸುದೀರ್ಘ ಕಾರ್ಯಾಚರಣೆಯ ನಂತರ ಬಂಧಿಸುವಲ್ಲಿ ಯಶಸ್ವಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗು ರಾಜ್ಯ ಪೋಲಿಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಧನ್ಯವಾದ ತಿಳಿಸಿದ್ದಾರೆ.

Advertisement

ʼಎನ್.ಐ.ಎ ತಂಡ ಹಾಗು ರಾಜ್ಯದ ಪೋಲಿಸರಿಗೆ ಧನ್ಯವಾದ ತಿಳಿಸುತ್ತೇನೆ. ಆರೋಪಿಗಳ ಜಾಡು ಹಿಡಿದು ಕೊಲ್ಕತ್ತಾದಲ್ಲಿ ಬಂಧಿಸುವಲ್ಲಿ ಇವರು ಯಶಸ್ವಿಯಾಗಿದ್ದಾರೆʼ ಎಂದು ಪತ್ರಕರ್ತರ ಸಮ್ಮುಖದಲ್ಲಿ ಸಿಎಂ ಹೇಳಿದ್ದಾರೆ.

ಆರೋಪಿಗಳನ್ನು ಬೆಂಗಳೂರಿಗೆ ಕರೆತಂದಿರುವ ಬಗ್ಗೆ ಮಾಹಿತಿ ನೀಡಿದ ಅವರು, ವಿಚಾರಣೆಯ ನಂತರ ನಡೆದ ಸಂಗತಿಯ ಬಗ್ಗೆ ತಿಳಿಸುತ್ತೇವೆ ಎಂದರು.

Advertisement

ಮುಸಾವಿರ್‌ ಹುಸೈನ್‌ ಮತ್ತು ಅಬ್ದುಲ್‌ ಮಥೀನ್‌ ಅಹ್ಮದ್‌ ಎಂಬ ತೀರ್ಥಹಳ್ಳಿ ಮೂಲದ ಆರೋಪಿಗಳನ್ನು NIA ತಂಡ ಮಾ.೧ರಂದು ಕೊಲ್ಕತ್ತಾದಲ್ಲಿ ಬಂಧಿಸಿತ್ತು. ಅಧಿಕಾರಿಗಳ ಪ್ರಕಾರ ಮಥೀನ್‌ನ ಯೋಜನೆಯಂತೆ ಮುಸಾವಿರ್‌ ಸ್ಫೋಟಕವನ್ನು ಕೆಫೆಯಲ್ಲಿ ಇರಿಸಿದ್ದ.

Advertisement
Tags :
Advertisement