For the best experience, open
https://m.newskannada.com
on your mobile browser.
Advertisement

ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್ ರದ್ದು ಕೋರಿ ಮೋದಿಗೆ ಸಿದ್ದು ಪತ್ರ

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
05:45 PM May 01, 2024 IST | Ashitha S
ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್ ರದ್ದು ಕೋರಿ ಮೋದಿಗೆ ಸಿದ್ದು ಪತ್ರ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

Advertisement

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಒಬ್ಬ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸೆಗಿದ್ದಾರೆ.

ಈ ಪ್ರಕರಣದ ಮಹತ್ವದ ಬಗ್ಗೆ ನೀವು ತಿಳಿದಿರಲೇಬೇಕಿತ್ತು. ಅಲ್ಲದೆ, ಪ್ರಜ್ವಲ್‌ 2024ರ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಎನ್‌ಡಿಎ ಅಭ್ಯರ್ಥಿಯೂ ಆಗಿದ್ದಾರೆ. ಜತೆಗೆ ಇಂಥ ಭಯಾನಕ ಹಾಗೂ ನಾಚಿಕೆಗೇಡಿನ ಪ್ರಕರಣ ಪ್ರಜ್ವಲ್‌ ಮೇಲಿದೆ. ಅಲ್ಲದೆ, ಈ ಪ್ರಕರಣವು ದೇಶದ ಜನತೆಯ ಆತ್ಮಸಾಕ್ಷಿಯನ್ನೇ ಕದಡಿಬಿಟ್ಟಿದೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ.

Advertisement

ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕ್ರಮವಾಗಬೇಕಾದರೆ, ಅವರನ್ನು ಕರೆತರಬೇಕಾದರೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ವಿದೇಶಾಂಗ ವ್ಯವಹಾರಗಳ ಖಾತೆಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್ ಎಂದರೇನು?‌
ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

Advertisement
Tags :
Advertisement