For the best experience, open
https://m.newskannada.com
on your mobile browser.
Advertisement

ಮಣಿಪಾಲದಲ್ಲಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಮಣಿಪಾಲ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
04:39 PM Jul 10, 2024 IST | Chaitra Kulal
ಮಣಿಪಾಲದಲ್ಲಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಮಣಿಪಾಲ: ಮಣಿಪಾಲ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

Advertisement

ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು. ತಂದೆ ಕೆ.ಎಸ್. ಮಹೇಶ್ ಅವರಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಚಿಕಿತ್ಸೆ ನಡೆಯುತ್ತಿತ್ತು. ತಾಯಿ ಉಡುಪಿಗೆ ಸಾಮಗ್ರಿಗಳನ್ನು ಖರೀದಿಸಲು ಹೋಗಿದ್ದಾಗ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಮಣಿಪಾಲ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Advertisement
Advertisement
Tags :
Advertisement